ಕಾರ್ಕಳ: ಅಂಗನವಾಡಿ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ
ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಇತರೆ ಮೀಸಲಾತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು […]
ವಿವಿಧೆಡೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ
ಉಡುಪಿ: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), […]
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ
ಉಡುಪಿ: ನಗರದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ನೇರ ಗುತ್ತಿಗೆ ಆಧಾರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ: ಅಮೆಜಾನ್ ನಲ್ಲಿ ಕ್ಷೇತ್ರ ಮಾರಾಟ ಕಾರ್ಯನಿರ್ವಾಹಕ ಹುದ್ದೆ ಖಾಲಿ
ಉಡುಪಿ ಯಲ್ಲಿ ಅಮೆಜಾನ್ ಸಂಸ್ಥೆಯಲ್ಲಿ ಕ್ಷೇತ್ರ ಮಾರಾಟ ಕಾರ್ಯನಿರ್ವಾಹಕರು ಬೇಕಾಗಿದ್ದಾರೆ. ಪಾತ್ರಗಳು ಮತ್ತು ಜವಾಬ್ದಾರಿಗಳು: • ವ್ಯಾಪಾರಿಗಳು ಅಥವಾ ಅಂಗಡಿಗಳಿಗೆ ಎಫ್.ಎಂ.ಸಿ.ಜಿ ಉತ್ಪನ್ನಗಳನ್ನು ಪರಿಚಯಿಸುವುದು ಮತ್ತು ಪ್ರಚಾರ ಮಾಡುವುದು • ಹೊಸ ಉತ್ಪನ್ನಗಳು ಮತ್ತು ಯಾವುದೇ ವಿಶೇಷ ಡೀಲ್‌ಗಳನ್ನು ಪ್ರಚಾರ ಮಾಡುವುದು. • ವಿತರಣಾ ವೇಳಾಪಟ್ಟಿಗಳು ಮತ್ತು ಮಾರಾಟದ ನಂತರದ ಸೇವೆಯ ಬಗ್ಗೆ ಗ್ರಾಹಕರಿಗೆ ಸಲಹೆ ನೀಡುವುದು. • ಆರ್ಡರ್‌ಗಳನ್ನು ರೆಕಾರ್ಡ್ ಮಾಡುವುದು ಮತ್ತು ಮಾರಾಟ ಕಚೇರಿಗೆ ವಿವರಗಳನ್ನು ಕಳುಹಿಸುವುದು. • ಮಾರಾಟದ ಪ್ರವೃತ್ತಿಗಳ ಬಗ್ಗೆ ಪ್ರತಿಕ್ರಿಯೆ […]
ಕೊಚ್ಚಿನ್ ಶಿಪ್‌ಯಾರ್ಡ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್, ಮಲ್ಪೆ ಇದರಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೆಜರ್-1 ಹುದ್ದೆ, ಸೂಪರ್‌ವೈಸರ್ ಹಾಗೂ ಡ್ರಾಫ್ಟ್ ಮ್ಯಾನ್‌ಗಳ ತಲಾ 2 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in career ಅಥವಾ ದೂರವಾಣಿ ಸಂಖ್ಯೆ: 9900959933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.