ಉಡುಪಿ: ಜಾಯ್ ಆಲುಕ್ಕಾಸ್ ನಲ್ಲಿ ಉದ್ಯೋಗಾವಕಾಶ

ಉಡುಪಿ: ಜೋಯ್ ಆಲುಕ್ಕಾಸ್ ಚಿನ್ನದ ಮಳಿಗೆಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಮತ್ತು ಸೇಲ್ಸ್ ಟ್ರೈನಿ ಹುದ್ದೆ ಖಾಲಿ ಇದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಏ. 5 ರಂದು ಬಡಗುಪೇಟೆಯಲ್ಲಿರುವ ಸಂಸ್ಥೆಯ ಮಳಿಗೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನೇರವಾಗಿ ಭೇಟಿ ನೀಡಬಹುದು ಅಥವಾ [email protected] ಗೆ ತಮ್ಮ ಬಯೋಡೇಟಾ ಕಳುಹಿಸಬಹುದು. ಪದವಿ ಅಥವಾ ಡಿಪ್ಲೋಮಾ ಆದವರಿಗೆ ಆದ್ಯತೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 0820-2593777/ 9449842262
ಕೌಶಲ್ಯ ಭಾರತ ಕೇಂದ್ರ ಹಾಗೂ Rooman Technolgies ವತಿಯಿಂದ ಉಚಿತ ತರಬೇತಿ ಹಾಗೂ ಉದ್ಯೋಗಾವಕಾಶ

ಮಣಿಪಾಲ: ಕೌಶಲ್ಯ ಭಾರತ ಕೇಂದ್ರ ಹಾಗೂ Rooman Technolgies ಮಣಿಪಾಲ ವತಿಯಿಂದ ಉಚಿತ ತರಬೇತಿ ಜೊತೆಗೆ ಉದ್ಯೋಗಾವಕಾಶ ತರಬೇತಿ ಕೇಂದ್ರವು ಹವಾನಿಯಂತ್ರಿತವಾಗಿದ್ದು ಜಾಗತಿಕ ದರ್ಜೆಯಲ್ಲಿ ರೂಪುಗೊಂಡಿದೆ. ಲಭ್ಯವಿರುವ ತರಬೇತಿಗಳು 1.ಸಾಫ್ಟ್ ವೇರ್ ಡೆವೆಲಪ್ ಮೆಂಟ್ 2.ಎಫ್ ಟಿ ಸಿ ಪಿ (ಫೀಲ್ಡ್ ಟೆಕ್ನೀಶಿಯನ್ ಕಂಪ್ಯೂಟರ್ ಫೆರಿಫೆರಲ್) 3.ಡೊಮೆಸ್ಟಿಕ್ ಐಟಿಹೆಲ್ಪ್ ಡೆಸ್ಕ್ ಅಟೆಂಡೆಂಟ್ 4.ಟೈಲರಿಂಗ್ ಕೋರ್ಸ್ ತರಬೇತಿಗಳನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 9513222512/ 8904195713. ತರಗತಿಗಳು ಅತಿ ಶೀಘ್ರದಲ್ಲಿ ಪ್ರಾರಂಭವಾಗಲಿವೆ.
ಕಾರ್ಕಳ: ಅಂಗನವಾಡಿ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಪದವು, ಕುರ್ಸುಕಟ್ಟೆ, ಕಂಬಳಗುಡ್ಡೆ, ಕಾಯಿನಾಲು, ನಂದಳಿಕೆ ಮಾವಿನಕಟ್ಟೆ, ಸಚ್ಚರಿಪೇಟೆ-2, ಮಲೆಬೆಟ್ಟು ಮತ್ತು ಮಲಾಯಿಬೆಟ್ಟು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿಯರ ಹುದ್ದೆಗೆ ಇತರೆ ಮೀಸಲಾತಿ ಹೊಂದಿರುವ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 29 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಾರ್ಕಳ ದೂ.ಸಂಖ್ಯೆ: 08258-230992 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಕಳ ಶಿಶು […]
ವಿವಿಧೆಡೆಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಉಡುಪಿ ತಾಲೂಕು ಶಿಶು ಅಭಿವೃದ್ಧಿ ಯೋಜನೆಯ ಗ್ರಾಮ ಪಂಚಾಯತ್, ನಗರಸಭೆ ಮತ್ತು ಪುರಸಭೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಾದ ಶಿವಾನಂದನಗರ (ಸಾಮಾನ್ಯ), ಹೆಜಮಾಡಿ ಬೋರುಗುಡ್ಡೆ (ಸಾಮಾನ್ಯ), ಕಾಜರಗುತ್ತು (ಸಾಮಾನ್ಯ), ಧರ್ಮೆಟ್ಟು (ಸಾಮಾನ್ಯ) ಮತ್ತು ಮಣಿಪುರ ವಿ.ಪಿ (ಸಾಮಾನ್ಯ) ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಕನಿಷ್ಠ ಪಿ.ಯು.ಸಿ ತೇರ್ಗಡೆ ಹೊಂದಿರುವ, ಎಸ್.ಎಸ್.ಎಲ್.ಸಿ.ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಅಭ್ಯಾಸ ಮಾಡಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಹಾಗೂ ಅದಮಾರು (ಸಾಮಾನ್ಯ), ಶಿವಾನಂದನಗರ (ಸಾಮಾನ್ಯ), […]
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ನಗರದ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದಡಿ ನೇರ ಗುತ್ತಿಗೆ ಆಧಾರದಲ್ಲಿ ಪ್ರಯೋಗಶಾಲಾ ತಂತ್ರಜ್ಞರ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.