ದ.ಕ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿಯಲ್ಲಿ ಉದ್ಯೋಗಾವಕಾಶ

ಮಂಗಳೂರು: ದ.ಕ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪನಿಯಲ್ಲಿ ಸ್ಥಳೀಯ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ. ರಾಜ್ಯದ 29 ಜಿಲ್ಲೆಗಳಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮಾಡಲು ಪ್ರತಿ ಜಿಲ್ಲೆಗೆ 50 ಅಭ್ಯರ್ಥಿಯ ಅವಶ್ಯಕತೆ ಇದ್ದು, 35 ವರ್ಷ ಒಳಗಿನ ಯುವಕ/ಯುವತಿಯರು, ವಿಶೇಷವಾಗಿ ರೈತರ ಮಕ್ಕಳು ಅರ್ಜಿ ಸಲ್ಲಿಸಬಹುದು. ವೇತನ: 15,000ರೂ ಜೊತೆಗೆ ಭತ್ಯೆ ನೀಡಲಾಗುವುದು. ಅರ್ಹತೆ: ಅಭ್ಯರ್ಥಿಯು ಪದವೀಧರರಾಗಿದ್ದು, ಆಧಾರ್ ಕಾರ್ಡ್ ಮತ್ತು ದ್ವಿಚಕ್ರ ವಾಹನ ಪರವಾನಗಿಯನ್ನು ಹೊಂದಿರಬೇಕು. 500 ರೂ ಡಿ.ಡಿ ಯೊಂದಿಗೆ ಬಯೋಡೀಟಾವನ್ನು […]
ಮಂಗಳೂರು: ಕ್ಲಿಕ್ ಲ್ಯಾಬ್ಸ್ ನಲ್ಲಿ ಉದ್ಯೋಗಾವಕಾಶ

ಮಂಗಳೂರು: ಕ್ಲಿಕ್ ಲ್ಯಾಬ್ಸ್ ಸಂಸ್ಥೆಯಲ್ಲಿ ಕಸ್ಟಮರ್ ಸಕ್ಸೆಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ. ಕೌಶಲ್ಯ: ಗುಣಮಟ್ಟದ ಮತ್ತು ವೈಯಕ್ತೀಕರಿಸಿದ ಗ್ರಾಹಕ ಸೇವೆ ನೀಡಲು ಸಮರ್ಥರಾಗಿರಬೇಕು. ಉತ್ಪನ್ನಗಳ ಕುರಿತು ಒಳನೋಟಗಳನ್ನು ರವಾನಿಸಿ ಮತ್ತು ಕಂಪನಿ ತಮ್ಮ ಡಿಜಿಟಲ್ ಗುರಿಯನ್ನು ಸಾಧಿಸಲು ಬೆಂಬಲಿಸಬೇಕು. ಗ್ರಾಹಕರೊಂದಿಗೆ ಸಂವಹನ ನಡೆಸಿ ಮತ್ತು ನಿಯಮಿತ ಪ್ರತಿಕ್ರಿಯೆಯನ್ನು ಸಂಗ್ರಹಿಸಬೇಕು. ಗ್ರಾಹಕರ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡಬೇಕು. ಅನುಭವ: 0-2 ವರ್ಷ ಸ್ಥಳ: ಮಂಗಳೂರು ಇ-ಮೇಲ್ ವಿಳಾಸ: [email protected]
ಜಿ.ಪಂ/ತಾಲೂಕು ನಿರ್ವಹಣಾ ಘಟಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉಡುಪಿ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಯೋಜನೆಯಡಿ ಉಡುಪಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಅಭಿಯಾನ ನಿರ್ವಾಹಣಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಹೊರಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ zpudupi.karnataka.gov.in ಅಥವಾ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಉಡುಪಿ ಮೊ.ನಂ: 9480878002 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಅಕೌಂಟೆಂಟ್ ಹುದ್ದೆ ಖಾಲಿ

ಉಡುಪಿ: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಉಡುಪಿಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ -1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಆ.26 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಉಡುಪಿ: ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರೈ.ಲಿ, ಜನಸ್ನೇಹಿ ಪ್ರೈ.ಲಿ ಮತ್ತು ಶಾಲಿಮರ್ ಪ್ರಿಂಟ್ಸ್ ಕಂಪನಿಗಳ ವತಿಯಿಂದ ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ […]