ಸೆ. 20 ರಂದು ಧನಂಜಯ ಟವರ್ಸ್ ನಲ್ಲಿ ನೇರ ಸಂದರ್ಶನ

ಉಡುಪಿ: ಜಿಲ್ಲಾ ಕೈಗಾರಿಕಾ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಸೆಪ್ಟಂಬರ್ 20 ರಂದು ಬೆಳಗ್ಗೆ 10.30 ಕ್ಕೆ ಹರ್ಷ ರಿಟೇಲ್ ಪ್ರೈಲಿ, ಧನಂಜಯ ಟವರ್ಸ್, ಅಜ್ಜರಕಾಡು, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದೆ. ಎಮ್.ಬಿ.ಎ, ಬಿ.ಇ, ಇಂಜಿನಿಯರಿಂಗ್, ಐ.ಟಿ.ಐ, ಡಿಪ್ಲೋಮಾ ಮತ್ತು ಇತರೆ ಯಾವುದೇ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿ ಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ […]

ಉಡುಪಿ: ಬಿ.ಐ.ಇ.ಆರ್.ಟಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಉಡುಪಿ: 2023-24ನೇ ಸಾಲಿನಲ್ಲಿ ಉಡುಪಿ ಜಿಲ್ಲೆಯಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಪ್ರಾಥಮಿಕ ಶಾಲಾ ಹಂತದ ಖಾಲಿ ಇರುವ ಬಿ.ಐ.ಇ.ಆರ್.ಟಿ ಹುದ್ದೆಗಳಿಗೆ ನೇರ ಗುತ್ತಿಗೆ ಆಧಾರದ ಮೇಲೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಉಪ ಯೋಜನಾ ಸಮನ್ವಯ ಅಧಿಕಾರಿ, ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಕಚೇರಿಯನ್ನು ಇದೇ ಸೆ.15ರೊಳಗೆ ಸೂಕ್ತ ದಾಖಲೆಗಳೊಂದಿಗೆ ಸಂಪರ್ಕಿಸಬಹುದು ಎಂದು ಸಮಗ್ರ ಶಿಕ್ಷಣ ಅಭಿಯಾನದ ಉಪನಿರ್ದೇಶಕರು(ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನೆ […]

ಕಾಪು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಉಪನ್ಯಾಸಕರ ಹುದ್ದೆ ಖಾಲಿ

ಕಾಪು: ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಯಾಂತ್ರಿಕ ವಿಭಾಗ ಮತ್ತು ಗಣಕಯಂತ್ರ ವಿಭಾಗಗಳಲ್ಲಿ 4 ವರ್ಷಗಳ ಇಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳಿಂದ ತಾತ್ಕಾಲಿಕವಾಗಿ ಅರೆಕಾಲಿಕ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ [email protected] ಅಥವಾ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9480773870 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳೂರು: ಕಾಂಚನಾ ಗ್ರೂಪ್ ನಲ್ಲಿ ಖಾಲಿ ಇರುವ ಹುದ್ದೆಗೆ ನೇರ ಸಂದರ್ಶನ

ಮಂಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕಾಂಚನಾ ಗ್ರೂಪ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕಾಂಚನಾ ಗ್ರೂಪ್ ಇಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಆ.31 ಗುರುವಾರದಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ1.30ರವರೆಗೆ ಪಿ.ಯು.ಸಿ, ಪದವಿ, ಐ.ಟಿ.ಐ ಅಥವಾ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಮಹಾನಗರ ಪಾಲಿಕೆ ಕಟ್ಟಡ, ಲಾಲ್‌ಭಾಗ್, ಮಂಗಳೂರು ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಹುದ್ದೆಗಳ ಮತ್ತು ಕೆಲಸದ ಸ್ಥಳದ ವಿವರ 1. ಸೇಲ್ಸ್ ಎಕ್ಸಿಕ್ಯೂಟಿವ್. […]

ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗಾಗಿ ಅರ್ಜಿ ಆಹ್ವಾನ

ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯಡಿ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ತಂತ್ರಜ್ಞಾನ ಅಥವಾ ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ/ ಪದವಿಯನ್ನು ಅಧಿಕೃತ ರಾಷ್ಟ್ರ ಅಥವಾ ಅಂತರಾಷ್ಟ್ರೀಯ ವಿಶ್ವವಿದ್ಯಾಲಯ / ಸಂಸ್ಥೆಗಳಿಂದ ಪಡೆದಿರುವ, ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ ಕುರಿತು 3-5 ವರ್ಷಗಳ ಅನುಭವ […]