ಕೋಟ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ಪಕ್ಷದಿಂದ ಅಮಾನತು

ಉಡುಪಿ : ಕೋಟ ಜಿಲ್ಲಾ ಪಂಚಾಯತ್ ಸದಸ್ಯ ರಾಘವೇಂದ್ರ ಕಾಂಚನ್ ರವರ ಹೆಸರು ಕೋಟ ಪೋಲಿಸ್ ಠಾಣಾ ವ್ಯಾಪ್ತಿಯ ಅವಳಿ ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ಹೆಸರಿಸಲ್ಪಟ್ಟಿರುವುದರಿಂದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿ.ಜೆ.ಪಿ ಅಧ್ಯಕ್ಷರಾದ ಮಟ್ಟಾರ್ ರತ್ನಕಾರ ಹೆಗ್ಡೆಯವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.