ಪತ್ರಕರ್ತರ ಮೇಲೆ ಹಲ್ಲೆ: ಉಡುಪಿ ಪತ್ರಕರ್ತರ ಸಂಘದಿಂದ ಖಂಡನೆ
ಉಡುಪಿ: ಬೆಂಗಳೂರಿನ ದೇವರ ಜೀವನ ಹಳ್ಳಿ (ಡಿ ಜಿ ಹಳ್ಳಿ) ಪ್ರಕರಣದಲ್ಲಿ ವರದಿ ಮಾಡಲು ತೆರಳಿದ್ದ ಸುವರ್ಣ ನ್ಯೂಸ್ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿ, ವಾಹನ ಜಖಂ ಮಾಡಿರುವುದನ್ನು ಉಡುಪಿ ಪತ್ರಕರ್ತರ ಸಂಘ ಖಂಡಿಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಹಲ್ಲೆಕೋರರ ಮೇಲೆ ಕೂಡಲೇ ಕಾನೂನು ಕ್ರಮ ಕೈಗೊಂಡು, ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಸರಕಾರವನ್ನು ಒತ್ತಾಯಿಸುತ್ತದೆ ಎಂದು ಸಂಘದ ಅಧ್ಯಕ್ಷರು/ ಪ್ರಧಾನ ಕಾರ್ಯದರ್ಶಿ ತಿಳಿಸಿದ್ದಾರೆ.