ಮಾ.7 ಮತ್ತು 8 ರಂದು ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ: ಕರಾವಳಿಯಲ್ಲಿ ಮೊದಲ ಬಾರಿ ರಾಜ್ಯ ಸಮ್ಮೇಳನಕ್ಕೆ ಸಿದ್ಧ
ಮಂಗಳೂರು: ಪತ್ರಕರ್ತರ 35ನೇ ರಾಜ್ಯ ಸಮ್ಮೇಳನ 2020, ಮಾ.7 ಮತ್ತು 8ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಕರಾವಳಿ ಭಾಗದಲ್ಲಿ ಪ್ರಥಮ ಬಾರಿಗೆ ರಾಜ್ಯ ಸಮ್ಮೇಳನ ನಡೆಯುತಿದೆ. 1976 ಅಕ್ಟೋಬರ್ 6ರಂದು ಉದಯಿಸಿದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಇದೀಗ ನಿರಂತರ ರಚನಾತ್ಮಕ ಚಟುವಟಿಕೆಗಳ ಆಗರದಂತಿದೆ. ಈಗಾಗಲೇ ದೇಶದಲ್ಲೇ ಅಭೂತಪೂರ್ವ ಎನಿಸಿದ ಎರಡು ಗ್ರಾಮ ವಾಸ್ತವ್ಯ ಕಾರ್ಯಗಳಿಂದ ಮನೆ ಮಾತಾಗಿದೆ. 2019ರ […]