ಮಾಹೆ ವತಿಯಿಂದ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ಹಸ್ತಾಂತರ
ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್(MAHE) ವತಿಯಿಂದ 5 ಲಕ್ಷ ರೂ. ದೇಣಿಗೆಯನ್ನು ಬುಧವಾರ ಹಸ್ತಾಂತರಿಸಲಾಯಿತು. ಮಣಿಪಾಲ ಮಾಹೆಯ ಎಜ್ಯು ಕಟ್ಟಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್.ಎಸ್.ಬಲ್ಲಾಳ್ ಹಾಗೂ ಉಪ ಕುಲಪತಿ ಲೆ.ಜ.ಡಾ.ಎಂ.ಡಿ.ವೆಂಕಟೇಶ್ ಅವರು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ 5 ಲಕ್ಷ ರೂ. […]