ಕೊರೊನಾ ಜನಜಾಗೃತಿ ಮೂಡಿಸುವಲ್ಲಿ ಪತ್ರಕರ್ತರ ಪಾತ್ರ ಹಿರಿದು: ಯಶ್‍ಪಾಲ್ ಸುವರ್ಣ
ಉಡುಪಿ: ಕೊರೊನಾ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೀಡಾಗಿರುವ ಉಡುಪಿ ಜಿಲ್ಲಾ ಪತ್ರಕರ್ತರ ಸಂಘ ಹಾಗೂ ಕಾಪು ಪತ್ರಕರ್ತರ ಸಂಘದ 75 ಸದಸ್ಯರಿಗೆ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ತಮ್ಮ ವೈಯುಕ್ತಿಕ ನೆಲೆಯಲ್ಲಿ ಪಡಿತರ ಕಿಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್‍ಪಾಲ್ ಸುವರ್ಣ ಕೊರೊನಾ ಲಾಕ್‍ಡೌನ್ ಸಂಕಷ್ಟದ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್‍ಗಳಾಗಿ ಸೇವೆ ಸಲ್ಲಿಸಿ ಕೊರೋನಾ ಜನಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರವಹಿಸುವ ಪತ್ರಕರ್ತರ ಕಾರ್ಯ ಶ್ಲಾಘನೀಯ ಎಂದರು. ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ […]