ಪತ್ರಕರ್ತರು ಸಮಾಜದಲ್ಲಿನ ಸಮಸ್ಯೆಗಳಿಗೆ ತಮ್ಮ ಹರಿತವಾದ ಲೇಖನಿಗಳ ಮೂಲಕ ಜಾಗೃತಿ ಮೂಡಿಸುತ್ತಾರೆ: ಯಶ್‍ಪಾಲ್
ಪತ್ರಕರ್ತರು ಸಮಾಜದಲ್ಲಿನ ಸಮಸ್ಯೆಗಳಿಗೆ ತಮ್ಮ ಹರಿತವಾದ ಲೇಖನಿಗಳ ಮೂಲಕ ಜಾಗೃತಿ ಮೂಡಿಸುತ್ತಾರೆ. ದಿನದ ಇಪ್ಪತ್ತನಾಲ್ಕು ಗಂಟೆಯೂ ದಣಿವರಿಯದೇ ಸೇವೆ ಸಲ್ಲಿಸುವ ಜಿಲ್ಲೆಯ ಪತ್ರಕರ್ತರು ಕ್ರೀಡಾಕೂಟ ಏರ್ಪಡಿಸುವ ಮೂಲಕ ಕೀಡಾ ಸ್ಪೂರ್ತಿ ಮೆರೆದಿರುವುದು ಶ್ಲಾಘನೀಯ ಎಂದು ಮೀನುಗಾರಿಕ ಮಂಡಳಿ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಹೇಳಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪ್ರೆಸ್ ಕ್ಲಬ್ ಸಹಯೋಗದಲ್ಲಿ ಮಂಗಳವಾರ ಅಜ್ಜರಕಾಡು ಕ್ರೀಡಾಂಗದಲ್ಲಿ ನಡೆದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನುದ್ದೇಶಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾದ ಬಡಗಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ […]