ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ವಿರುದ್ದದ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ವಿರುದ್ಧ ಆರಂಭಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ನಡ್ಡಾ ವಿರುದ್ಧ ಐಪಿಸಿ ಸೆಕ್ಷನ್ 171-ಎಫ್ ಅಡಿಯಲ್ಲಿ ‘ಅಸ್ಪಷ್ಟ ದೂರಿನಲ್ಲಿ’ ‘ಸಡಿಲವಾಗಿ ಹೊರಿಸಲಾದ ಅಪರಾಧದ’ ಆಧಾರದ ಮೇಲೆ ಎಫ್‌ಐಆರ್ ಅನ್ನು ‘ಅಜಾಗರೂಕತೆಯಿಂದ’ ದಾಖಲಿಸಲಾಗಿದೆ ಎಂದು ಕಂಡುಕೊಂಡಿದೆ. ಈ ನಿಬಂಧನೆಯು ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಅಥವಾ ಪ್ರಲೋಭನೆಯನ್ನು ದಂಡಿಸುತ್ತದೆ. ಮುಂದಿನ ಪ್ರಕ್ರಿಯೆಗಳಿಗೆ ಅನುಮತಿ ನೀಡುವುದು ಅರ್ಜಿದಾರರ ವಿರುದ್ಧ […]
ಭಾರತೀಯ ಜನತಾ ಪಕ್ಷದ ‘ಪ್ರಜಾ ಪ್ರಣಾಳಿಕೆ’ ಬಿಡುಗಡೆ: ಬಿಪಿಎಲ್ ಕುಟುಂಬಕ್ಕೆ ನಂದಿನಿ ಹಾಲು; ವರ್ಷಕ್ಕೆ ಮೂರು ಉಚಿತ ಸಿಲಿಂಡರ್ ಘೋಷಣೆ
ಬೆಂಗಳೂರು: ಚುನಾವಣೆಗೆ ಇನ್ನು ಒಂಭತ್ತು ದಿನಗಳು ಬಾಕಿ ಉಳಿದಿದ್ದು, ಭಾರತೀಯ ಜನತಾ ಪಕ್ಷವು ತನ್ನ ಚುನಾವಣಾ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಬಿಜೆಪಿ ರಾಷ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಣಾಳಿಕೆಯನ್ನು ಬೆಂಗಳೂರಿನ ಶಾಂಗ್ರಿಲಾ ಹೋಟೆಲ್‌ನಲ್ಲಿ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಜೆಪಿ ನಡ್ಡಾ ಅವರೊಂದಿಗೆ ಪಕ್ಷದ ನಾಯಕರು ಭಾಗಿಯಾದರು. ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ ಮೂರು ಅಡುಗೆ ಅನಿಲ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ಪ್ರತಿ ವರ್ಷ ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದಂದು ಮೂರು ಸಿಲಿಂಡರ್ಗಳನ್ನು […]
ಎಪ್ರಿಲ್ 8 ಅಥವಾ 9 ರಂದು ಬಿಜೆಪಿ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ: ಬೊಮ್ಮಾಯಿ
ಬೆಂಗಳೂರು: ಕಳೆದೆರೆಡು ದಿನಗಳಿಂದ ಜಿಲ್ಲಾ ಸಮಿತಿಗಳಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಇಂದು ರಾಜ್ಯ ಕೋರ್ ಕಮಿಟಿ ಪರಿಶೀಲಿಸಿ, ಕೇಂದ್ರಕ್ಕೆ ಕಳುಹಿಸಿಕೊಡಲಿದೆ. ಬಹುತೇಕ ಎಪ್ರಿಲ್ 8 ಅಥವಾ 9 ರಂದು ಅಧಿಕೃತ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿಯಾಗಿದ್ದು, ಸ್ಪಷ್ಟ ಬಹುಮತದ ಸರ್ಕಾರ ರಚನೆಯಾಗುವ ವಿಶ್ವಾಸವಿದ್ದು, ಕೆಲವು ಕಡೆ ಅಚ್ಚರಿ ರೀತಿಯಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಟಿಕೆಟ್ ಪ್ರಕ್ರಿಯೆ ಅಂತಿಮಗೊಳಿಸಲು ಮಂಗಳವಾರ ಹಾಗೂ ಬುಧವಾರದಂದು ರಾಜ್ಯ […]
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರಿಗೆ ಬೆಳ್ಳಿಯ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ […]