ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನ್ಯಾಯಾಂಗ ಬಂಧನ
ಹುಬ್ಬಳ್ಳಿ: ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ನಾಳೆ ಸಂಜೆಯ ವರೆಗೆ (ಒಂದು ದಿನ) ನ್ಯಾಯಾಂಗ ಬಂಧನ ವಿಧಿಸಿ ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಆದೇಶ ನೀಡಿದೆ. ಇಂದು ಸಂಜೆ ವಿನಯ್ ಕುಲಕರ್ಣಿಯನ್ನು ಬಂಧಿಸಿದ ಸಿಸಿಬಿ ಅಧಿಕಾರಿಗಳು ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ವೇಳೆ ಸಿಬಿಐ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿಕೊಂಡರು. ಆದರೆ ಕೋರ್ಟ್ ವಿನಯ್ ಕುಲಕರ್ಣಿಯನ್ನು ನಾಳೆ ಸಂಜೆಯವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಹೀಗಾಗಿ ಇಂದು ರಾತ್ರಿ […]