ಜು.19: ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಸಭೆ

ಉಡುಪಿ: ಸರಕಾರವು ಪರಿಸರಕ್ಕೆ ಹಾನಿಯುಂಟು ಮಾಡುವ ಸಿಂಗಲ್ ಯೂಸ್ ಪ್ಲಾಸ್ಟಿಕ್ ವಸ್ತುಗಳ ಬಳಕೆ, ಮಾರಾಟ, ಸಂಗ್ರಹಣೆ ಹಾಗೂ ಸಾಗಾಣಿಕೆ ಮಾಡದಂತೆ ಆದೇಶ ಹೊರಡಿಸಿದ್ದು, ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ನಿಷೇಧ ಕುರಿತ ಸಭೆಯು ಜುಲೈ 19 ರಂದು ಮಧ್ಯಾಹ್ನ 3 ಗಂಟೆಗೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದ್ದು, ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗಡಿ ಮಾಲೀಕರು ಸಭೆಯಲ್ಲಿ ಭಾಗವಹಿಸುವಂತೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.