ಜುಲೈ 12ಕ್ಕೆ ಪಿಎಸ್‌ಐ ಮರುಪರೀಕ್ಷೆ ಪ್ರಶ್ನಿಸಿದ್ದ ಅರ್ಜಿವಿಚಾರಣೆ
ಬೆಂಗಳೂರು:ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರಿದ್ದ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ ಹಿನ್ನೆಲೆಯಲ್ಲಿ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು […]