ಜುಲೈ 1ರಿಂದ 10 ಕೆಜಿ ಧಾನ್ಯ ವಿತರಣೆ- ಸಿಎಂ ಸಿದ್ದರಾಮಯ್ಯ,ಅಲ್ಲಿಯವರೆಗೆ ಫಲಾನುಭವಿಗಳ ಖಾತೆಗೆ ಹಣ
ಬೆಂಗಳೂರು : ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಹೆಚ್ಚುವರಿ ಅಕ್ಕಿ ನೀಡಲು ನಾವು ತೀರ್ಮಾನಿಸಿದರೆ ಕೇಂದ್ರ ಸರ್ಕಾರ ಕುತಂತ್ರದಿಂದ ತಪ್ಪಿಸಿದೆ ಕೇಂದ್ರ ಸರ್ಕಾರ ಅಕ್ಕಿ ಕೊಡಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಪಾರದರ್ಶಕವಾಗಿ ಟೆಂಡರ್ ಕರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆಜಿ ಆಹಾರಧಾನ್ಯವನ್ನು ಜುಲೈ 1ರಿಂದ ನೀಡಬೇಕಾಗಿದೆ. ನಾವು ನಮ್ಮ ನಿಲುವಿನಿಂದ ಹಿಂದೆ ಸರಿಯದೆ ಯೋಜನೆಯನ್ನು ಜುಲೈ […]