ಕ್ರಿಮಿನಲ್ ಪ್ರಕರಣಗಳ ವಿಚಾರಣೆ ವ್ಯವಸ್ಥೆಯಲ್ಲಿ ಸುಧಾರಣೆ ಅತ್ಯಗತ್ಯ: ಸುಪ್ರೀಂಕೋರ್ಟ್ ನ್ಯಾ.ಅಬ್ದುಲ್ ನಜೀರ್
ಉಡುಪಿ: ನ್ಯಾಯಾಲಯದಲ್ಲಿನ ಕ್ರಿಮಿನಲ್ ಪ್ರಕರಣಗಳಲ್ಲಿ ಶೇ.95 ರಷ್ಟು ಮಂದಿ ಅಂತಿಮ ವಿಚಾರಣೆಯಲ್ಲಿ ನಿರಪರಾಧಿಗಳೆಂದು ಬಿಡುಗಡೆಯಾಗುತ್ತಿದ್ದು, ಇಂತಹ ಪ್ರಕರಣಗಳು ಇತ್ಯರ್ಥಗೊಳ್ಳುವುದಕ್ಕೆ ಸುಮಾರು 10 ವರ್ಷಗಳು ತೆಗೆದುಕೊಳ್ಳಲಿದ್ದು, ಈ ಪ್ರಕ್ರಿಯೆಗಳು ಮುಗಿಯುವವರೆಗೆ ಆಪಾದಿತ ವ್ಯಕ್ತಿಯು ಒಂದು ರೀತಿಯಲ್ಲಿ ಶಿಕ್ಷೆಯನ್ನೇ ಅನುಭವಿಸುತ್ತಾನೆ. ಈ ಬಗ್ಗೆ ಸುಧಾರಣೆಯ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಝೀರ್ ಅಭಿಪ್ರಾಯ ಪಟ್ಟರು. ಅವರು ಶುಕ್ರವಾರ ನಗರದ ಜಿಲ್ಲಾ ಕೋರ್ಟ್ ಆವರಣದಲ್ಲಿ, ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಉಡುಪಿ, ವಕೀಲರ ಸಂಘ ಉಡುಪಿ ಮತ್ತು ಬೈಂದೂರು […]