ಜಮ್ಮು ಕಾಶ್ಮೀರದ 35A ವಿಧಿಯು ಇತರ ನಾಗರಿಕರನ್ನು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ: ಜ. ಚಂದ್ರಚೂಡ್

ಹೊಸದಿಲ್ಲಿ: ಸಂವಿಧಾನದ 35A ವಿಧಿಯು ಜಮ್ಮು ಮತ್ತು ಕಾಶ್ಮೀರದಲ್ಲಿ ವಾಸಿಸದ ಜನರನ್ನು ಕೆಲವು ಪ್ರಮುಖ ಸಾಂವಿಧಾನಿಕ ಹಕ್ಕುಗಳಿಂದ ವಂಚಿತವಾಗಿಸಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ. “ಸಮಾನತೆಯ ಅವಕಾಶ, ರಾಜ್ಯ ಸರ್ಕಾರದಲ್ಲಿ ಉದ್ಯೋಗ ಮತ್ತು ಭೂಮಿ ಖರೀದಿಸುವ ಹಕ್ಕು -ಈ ವಿಧಿಯು ನಾಗರಿಕರಿಂದ ಇವೆಲ್ಲವನ್ನೂ ಕಸಿದುಕೊಳ್ಳುತ್ತದೆ. ಏಕೆಂದರೆ ನಿವಾಸಿಗಳು (ಜಮ್ಮು ಮತ್ತು ಕಾಶ್ಮೀರದ) ವಿಶೇಷ ಹಕ್ಕುಗಳನ್ನು ಹೊಂದಿದ್ದರಿಂದ, ಅನಿವಾಸಿಗಳನ್ನು ಹೊರಗಿಡಲಾಗಿತ್ತು” ಎಂದು ಅವರು ಹೇಳಿದ್ದಾರೆ. ಭಾರತೀಯ ಸಂವಿಧಾನವು “ಜಮ್ಮು ಮತ್ತು ಕಾಶ್ಮೀರದ ಸಂವಿಧಾನಕ್ಕಿಂತ ಉನ್ನತ […]

ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ಡಿ. ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಇಲ್ಲಿನ ರಾಷ್ಟ್ರಪತಿ ಭವನದ ಮೆಜೆಸ್ಟಿಕ್ ಲಾನ್ಸ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಇವರ ತಂದೆ ವೈ ವಿ ಚಂದ್ರಚೂಡ್ ರವರು ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ಸುದೀರ್ಘ ಸೇವೆ ಸಲ್ಲಿಸಿದ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ನ್ಯಾಯಮೂರ್ತಿ ಚಂದ್ರಚೂಡ್ ರವರು ನವೆಂಬರ್ 10, 2024 ರವರೆಗೆ […]

ಜಸ್ಟಿಸ್ ಡಿವೈ ಚಂದ್ರಚೂಡ್ ಸುಪ್ರೀಂಕೋರ್ಟಿನ ಮುಂದಿನ ಮುಖ್ಯನ್ಯಾಯಮೂರ್ತಿ

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಿದ್ದಾರೆ. ಅವರು ಮಂಗಳವಾರ ಬೆಳಗ್ಗೆ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರವನ್ನು ಹಸ್ತಾಂತರಿಸಿ, ಅವರನ್ನು ಮುಂದಿನ ಸಿಜೆಐ ಎಂದು ಗೊತ್ತುಪಡಿಸಿದರು. ಸುಪ್ರೀಂ ಕೋರ್ಟ್‌ನ ಇತರ ನ್ಯಾಯಾಧೀಶರ ಸಮ್ಮುಖದಲ್ಲಿ ಪತ್ರವನ್ನು ಹಸ್ತಾಂತರಿಸಲಾಯಿತು. ನ್ಯಾಯಮೂರ್ತಿ ಲಲಿತ್ ಅವರು ಈ ವಿಷಯದ ಬಗ್ಗೆ ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆಯಲಿದ್ದಾರೆ. ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಅವರು ತಮ್ಮ ಉತ್ತರಾಧಿಕಾರಿಯನ್ನು ಹೆಸರಿಸುವಂತೆ ಕೇಂದ್ರ […]