ಆಂಧ್ರಪ್ರದೇಶದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಎಸ್. ಅಬ್ದುಲ್ ನಜೀರ್ ನೇಮಕ
ನವದೆಹಲಿ: ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಎಸ್ ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಿಸಿದ್ದಾರೆ. ನ್ಯಾಯಮೂರ್ತಿ ನಜೀರ್ ಜನವರಿ 4 ರಂದು ನಿವೃತ್ತರಾದರು. ಅವರು ಐತಿಹಾಸಿಕ ಅಯೋಧ್ಯೆ ರಾಮ ಜನ್ಮಭೂಮಿ ತೀರ್ಪಿನ ಭಾಗವಾಗಿದ್ದರು. ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾವಣೆ ಮಾಡಲಾಗಿದೆ. ಅವಿಭಜಿತ ದ.ಕ ಜಿಲ್ಲೆಯ ಮೂಡಬಿದ್ರೆಯ ಬೆಳುವಾಯಿಯಲ್ಲಿ ಜಸ್ಟಿಸ್ ನಜೀರ್ ಅವರು ಜನವರಿ 5, 1958 ರಂದು ಜನಿಸಿದರು ಮತ್ತು […]