ಉಡುಪಿ: ತ್ವರಿತ ನ್ಯಾಯಕ್ಕಾಗಿ ಆಗಸ್ಟ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ
ಉಡುಪಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದಂತೆ ತ್ವರಿತ ನ್ಯಾಯಕ್ಕಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ನ್ಯಾಯಾಲಯಗಳ ಆವರಣದಲ್ಲಿ ಆಗಸ್ಟ್ 13 ರಂದು ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಅತೀ ಶೀಘ್ರದಲ್ಲಿ ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ. ಸದರಿ ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ಮೋಟಾರು ವಾಹನ ಅಪಘಾತ ಪರಿಹಾರ, ಚೆಕ್ ಅಮಾನ್ಯ ಹಾಗೂ ಬ್ಯಾಂಕ್ […]