‘ಲೋಕ’ ಅಖಾಡಕ್ಕಿಳಿದ ಅಣ್ಣಾಮಲೈ: ಕೊಯಮತ್ತೂರಿನಿಂದ ಸ್ಪರ್ಧಿಸಲಿರುವ ಕರುನಾಡ ಸಿಂಘಂ
ಚೆನ್ನೈ: ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ (K Annamalai) ಕರ್ನಾಟಕದಲ್ಲಿ ಚಿರಪರಿಚಿತ ಹೆಸರು. ಕರುನಾಡ ಸಿಂಘಂ ಎಂದೇ ಖ್ಯಾತಿವೆತ್ತ ಕೆ.ಅಣ್ಣಾಮಲೈ ತಮಿಳುನಾಡಿನ ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು ತಮಿಳುನಾಡು ರಾಜಕೀಯದಲ್ಲಿ ಸಂಚಲನ ಹುಟ್ಟುಹಾಕಿದ್ದಾರೆ. ಇದೀಗ, ಪಕ್ಷವು ಅವರನ್ನು ಕೊಯಮತ್ತೂರು ಕ್ಷೇತ್ರದಿಂದ ಕಣಕ್ಕಿಳಿಸಿದೆ. ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಅಣ್ಣಾಮಲೈ 2019 ರಲ್ಲಿ ಸೇವೆಗೆ ರಾಜೀನಾಮೆ ನೀಡಿ 2020 ರಲ್ಲಿ ಬಿಜೆಪಿ ಸೇರಿದರು. ಒಂದು ವರ್ಷದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡು 37 ನೇ ವಯಸ್ಸಿನಲ್ಲಿ ಅತಿ ಕಿರಿಯ […]
ಕೆ.ಅಣ್ಣಾಮಲೈ ನಟನೆಯ ಕನ್ನಡ ಚಲನಚಿತ್ರ ‘ಅರಬ್ಬಿ’ಯ ಟ್ರೈಲರ್ ಬಿಡುಗಡೆ
ಬೆಂಗಳೂರು: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಕೆ.ಅಣ್ಣಾಮಲೈ(K. Annamalai) ನಟಿಸಿರುವ ಮೊಟ್ಟ ಮೊದಲ ಕನ್ನಡ ಚಲನಚಿತ್ರ ‘ಅರಬ್ಬಿ’ಯ ಟ್ರೈಲರ್ ಬಿಡುಗಡೆ ಆಗಿದೆ. ಕೈಗಳಿಲ್ಲದ ಕೆ.ಎಸ್ ವಿಶ್ವಾಸ್ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆ ಮಾಡಿರುವ ನೈಜ ಕಥೆಯನ್ನು ಚಿತ್ರ ಒಳಗೊಂಡಿದೆ. ಈ ಚಿತ್ರದಲ್ಲಿ ವಿಶ್ವಾಸ್ ಅವರ ತರಬೇತುದಾರನ ಪಾತ್ರದಲ್ಲಿ ಅಣ್ಣಾಮಲೈ ನಟಿಸಿದ್ದಾರೆ. ಐಪಿಎಸ್ ವೃತ್ತಿಗೆ ವಿದಾಯ ಹೇಳಿದ ಬಳಿಕ ಅಣ್ಣಾಮಲೈ ಕನ್ನಡ ಸಿನಿಮಾ ಒಂದರಲ್ಲಿ ನಟಿಸಿದ್ದರು. ಈಗ ಅದರ ಟ್ರೈಲರ್ ಬಿಡುಗಡೆಗೊಂಡಿದೆ. ಅಣ್ಣಾಮಲೈ ಕೆಲವು ಆಕ್ಷನ್ […]
ಪಕ್ಷ ಪ್ರಚಾರಕ್ಕೆ ಕರುನಾಡ ಸಿಂಘಂ ಖ್ಯಾತಿಯ ಅಣ್ಣಾಮಲೈ ಸಾಥ್: ಇಂದು ಕೇಸರಿ ಕಲರವ ಬೃಹತ್ ರೋಡ್ ಶೋ
ಉಡುಪಿ: ಇಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮತ್ತು ಕರ್ನಾಟಕದ ಸಿಂಘಂ ಖ್ಯಾತಿಯ ಅಣ್ಣಾಮಲೈ ನೇತೃತ್ವದಲ್ಲಿ ಬೃಹತ್ ರೋಡ್ ಶೋ ಏಳೂರು ಮೊಗವೀರ ಭವನದಿಂದ ಹೊರಟು ವಡಭಾಂಡೇಶ್ವರ ಬಲರಾಮ ದೇವಸ್ಥಾನವನ್ನು ತಲುಪಲಿದೆ. ಆ ಬಳಿಕ ನಡೆಯುವ ಬೃಹತ್ ಸಮಾವೇಶದಲ್ಲಿ ಕೆ. ಅಣ್ಣಾಮಲೈ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕಾರ್ಕಳ: ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದ ಅಣ್ಣಾಮಲೈ
ಕಾರ್ಕಳ: ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಕಾರ್ಕಳ ವತಿಯಿಂದ ಐತಿಹಾಸಿಕ ಬೈಕ್ ರ‍್ಯಾಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಐಪಿಎಸ್ ಅಧಿಕಾರಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಷಾಮಲೈ ಕೆ., ಕಾರ್ಕಳ ಜೋಡುರಸ್ತೆಯ ಪೂರ್ಣಿಮಾ ಸಿಲ್ಕ್ಸ್ ಗೆ ಭೇಟಿ ನೀಡಿದರು. ಸಂಸ್ಥೆಯ ಮಾಲಕ ರವಿಪ್ರಕಾಶ್ ಪ್ರಭು ಅಣ್ಣಾಮಲೈ ಅವರಿಗೆ ಶಾಲು ಹೊದಿಸಿ ಸನ್ಮಾನಿಸಿದರು. ಸಂಸ್ಥೆಯ ಪಾಲುದಾರೆ ಶ್ರೀಮತಿ ಕಿರಣ ರವಿಪ್ರಕಾಶ್, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುರೇಶ್ ನಾಯಕ್ ಉಪಸ್ಥಿತರಿದ್ದರು.
ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಿಂದ ಜಗನ್ನಾಥ ಭವನ ಭೇಟಿ
ಬೆಂಗಳೂರು: ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಕರ್ನಾಟಕದ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿಗಳಾದ ಮನ್ ಸುಖ್ ಮಾಂಡವೀಯ ಹಾಗೂ ಕೆ. ಅಣ್ಣಾಮಲೈ ಭೇಟಿ ನೀಡಿ, ಭಾರತ ಮಾತೆಯ ಭಾವಚಿತ್ರಕ್ಕೆ ಹಾಗೂ ಜಗನ್ನಾಥ್ ರಾವ್ ಜೋಷಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ.ವಿ ಮುಂತಾದವರು ಉಪಸ್ಥಿತರಿದ್ದರು.