ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ಸೇರ್ಪಡೆ
ಉಡುಪಿ: ಮಾಜಿ ಸಂಸದ ಹಾಗೂ ಮಾಜಿ ಸಚಿವ ಕೆ. ಜಯಪ್ರಕಾಶ್ ಹೆಗ್ಡೆ ಅವರು ಕಾಂಗ್ರೆಸ್ (Congress) ಸೇರ್ಪಡೆಗೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ. ಮಾರ್ಚ್ 12 ಮಂಗಳವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಕೆ ಪಿ ಸಿ ಸಿ ಕಚೇರಿಯಲ್ಲಿ ವಿದ್ಯುಕ್ತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರುವುದಾಗಿ ಅವರು ತಿಳಿಸಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Loksabha Elections) ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅವರು ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.
ಬಲಿಷ್ಠ ಮತ್ತು ಸಮೃದ್ಧ ಉಡುಪಿಯ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕಾರ್ಯೋನ್ಮುಖರಾಗಿ: ಸಚಿವ ಸುನೀಲ್ ಕುಮಾರ್
ಉಡುಪಿ: ಉಡುಪಿ ಜಿಲ್ಲೆ ರಚನೆಯಾಗಿ 25 ವರ್ಷಗಳಾಗಿದ್ದು, ಮುಂದಿನ 25 ವರ್ಷಗಳಲ್ಲಿ, ಜಿಲ್ಲೆಯನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿ ಪಡಿಸುವ ಯೋಜನೆಗಳ ಕುರಿತಂತೆ ದಿಕ್ಸೂಚಿಯನ್ನು ರಚಿಸಿ, ಅದರಂತೆ ಕಾರ್ಯನಿರ್ವಹಿಸುವ ಮೂಲಕ ಬಲಿಷ್ಠ ಮತ್ತು ಸಮೃದ್ಧ ಉಡುಪಿ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕಾರ್ಯನಿರ್ವಹಿಸಬೇಕಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಹೇಳಿದರು. ಅವರು ಶನಿವಾರ ಪುರಭವನದಲ್ಲಿ, ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಉಡುಪಿ ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ದಿಕ್ಸೂಚಿ […]
ಹೆಜಮಾಡಿಯಲ್ಲಿ ಟೋಲ್ ಶುಲ್ಕ ಯಥಾಸ್ಥಿತಿ ಕಾಪಾಡಿ: ಅಧಿಕಾರಿಗಳಿಗೆ ಎಸ್.ಅಂಗಾರ ಸೂಚನೆ
ಉಡುಪಿ: ಜಿಲ್ಲೆಯ ಹೆಜಮಾಡಿ ಟೋಲ್‌ಗೇಟ್‌ನಲ್ಲಿ ಈ ಹಿಂದೆ ಪಡೆಯುತ್ತಿದ್ದ ದರಗಳನ್ನು ಮಾತ್ರ ಪಡೆಯುವಂತೆ ಹಾಗೂ ಯಾವುದೇ ಕಾರಣಕ್ಕೂ ಸುರತ್ಕಲ್ ಟೋಲ್ ಪ್ಲಾಜಾ ವಿಲೀನದ ಪರಿಷ್ಕೃತ ದರಗಳನ್ನು ಪಡೆಯದಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಸೂಚನೆ ನೀಡಿದರು. ಅವರು ಶನಿವಾರ ಉಡುಪಿ ತಾಲೂಕು ಕಚೇರಿಯಲ್ಲಿ, ರಾಷ್ಟ್ರೀಯ ಹೆದ್ದಾರಿ 66 ರ ಸುರತ್ಕಲ್ ಟೋಲ್ ಪ್ಲಾಜಾವನ್ನು ತೆರವುಗೊಳಿಸಿ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟೋಲ್ […]