ಉಡುಪಿ: ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗದಿಂದ ಪೌರಕಾರ್ಮಿಕರೊಂದಿಗೆ ದೀಪಾವಳಿ ಆಚರಣೆ
ಉಡುಪಿ: ಕೆ. ಕೃಷ್ಣಮೂರ್ತಿ ಆಚಾರ್ಯ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇದರ ವತಿಯಿಂದ ಉಡುಪಿ ನಗರಸಭೆಯ ಇತಿಹಾಸದಲ್ಲಿ 325ಕ್ಕಿಂತ ಹೆಚ್ಚು ಪೌರಕಾರ್ಮಿಕರಿಗೆ ಹೊಸ ಬಟ್ಟೆ ಹಾಗೂ ಸಿಹಿತಿಂಡಿಯನ್ನು ವಿತರಿಸಿ ಪೌರಕಾರ್ಮಿಕ ರೊಂದಿಗೆ ದೀಪಾವಳಿ ಹಬ್ಬವನ್ನು ವಿಶೇಷವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾದ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾದ ಲಕ್ಷ್ಮಿ ಮಂಜುನಾಥ್, ಉಡುಪಿ ನಗರಸಭೆಯ ಪೌರಾಯುಕ್ತ ರಾದ ಉದಯಕುಮಾರ,ಆರೋಗ್ಯ ಅಧಿಕಾರಿಗಳಾದ ಕರುಣಾಕರ್ ಹಾಗೂ ಶಶಿರೇಖಾ, ಉಡುಪಿ ನಗರಸಭಾ ಸದಸ್ಯರಾದ ಅಮೃತಾ ಕೃಷ್ಣಮೂರ್ತಿ, ಸಮಾಜಸೇವಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ, […]