ಅಷ್ಟ ಮಠದ ಖ್ಯಾತಿಯ ಮುಕುಟಕ್ಕೆ ಮತ್ತೊಂದು ಗರಿ ಭಗವಾನ್ ನಿತ್ಯಾನಂದ ಮಂದಿರ: ಡಾ.ಎಚ್. ಎಸ್. ಬಲ್ಲಾಳ್
ಉಡುಪಿ: ನಗರದ ಕೆ.ಎಂ ಮಾರ್ಗದಲ್ಲಿರುವ ನಿತ್ಯಾನಂದ ಸ್ವಾಮಿ ಮಂದಿರ ಮಠವು ನವೀಕೃತಗೊಂಡಿದ್ದು ಜ.16 ರಂದು ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹ ಪ್ರತಿಷ್ಠೆ ಕಾರ್ಯಕ್ರಮವು ಅದ್ದೂರಿಯಾಗಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಮಣಿಪಾಲ ಮಾಹೆ ವಿ.ವಿ. ಸಹಕುಲಾಧಿಪತಿ ಡಾ.ಎಚ್. ಎಸ್. ಬಲ್ಲಾಳ್, ಮಂದಿರದ ಜೊತೆ ಜೊತೆಗೆ ಶೈಕ್ಷಣಿಕ, ಹಾಗೂ ಆರೋಗ್ಯ ಸಂಸ್ಥೆಗಳು ಕೂಡಾ ಸ್ಥಾಪನೆಯಾಗಲಿ. ಅಷ್ಟ ಮಠಗಳಿಗೆ ಖ್ಯಾತಿ ಪಡೆದ ಉಡುಪಿ ನಗರದ ಮುಕುಟಕ್ಕೆ ಶ್ರೀ ಭಗವಾನ್ ನಿತ್ಯಾನಂದ ಮಂದಿರ ಇನ್ನೊಂದು ಗರಿ […]
ಜ.16 ರಂದು ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ನವೀಕೃತ ಮಂದಿರ ಮಠ ಲೋಕಾರ್ಪಣೆ; ವಿಗ್ರಹ ಪ್ರತಿಷ್ಠೆ
ಉಡುಪಿ: ನಗರದ ಕೆ.ಎಂ ಮಾರ್ಗದಲ್ಲಿ ಅಮೂಲಾಗ್ರ ಜೀರ್ಣೋದ್ಧಾರಗೊಂಡ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠದಲ್ಲಿ ಪ್ರತಿಷ್ಠಾಪಿಸಲ್ಪಡುವ ಶ್ರೀ ಗುರುವರ್ಯರ ಪಂಚಲೋಹದ ವಿಗ್ರಹದ ಮೆರವಣಿಗೆಯು ಜ 15 ರಂದು ನಡೆಯಲಿದ್ದು, ಜ 16 ರಂದು ನವೀಕೃತ ಮಂದಿರ ಲೋಕಾರ್ಪಣೆ, ಗರ್ಭಗೃಹ ಸಮರ್ಪಣೆ, ಗುರುಗಳ ವಿಗ್ರಹ ಪ್ರತಿಷ್ಠೆ ಧಾರ್ಮಿಕ ಸಭೆ, ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ. ಮಂದಿರದ ಹಿನ್ನೆಲೆ ಉಡುಪಿ ಮೂಲದ ಮುಂಬಯಿ ನಿವಾಸಿ ಶ್ರೀ ನಿತ್ಯಾನಂದ ಸ್ವಾಮಿಯವರ ಭಕ್ತೆ ಸಾಧ್ವಿ ಸೀತಮ್ಮ ಶೆಟ್ಟಿಯವರು ಸದ್ಗುರು ಶ್ರೀ ಜನಾನಂದ […]