ಕೆ.ಪಿ. ನಂಜುಂಡಿಯವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ: ವಿಶ್ವಕರ್ಮ ಮಹಾಸಭಾದಿಂದ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ
ಉಡುಪಿ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ವಿಶ್ವಕರ್ಮ ಮಹಾಸಭಾ ವತಿಯಿಂದ ಮಂಗಳೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬಿ.ಜೆ.ಪಿ ರಾಜ್ಯಾಧ್ಯಕ್ಷರು ಹಾಗೂ ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ವಿಶ್ವಕರ್ಮ ಮಹಾಸಭಾ ಸಂಘಟನೆಯ ಜಿಲ್ಲಾಧ್ಯಕ್ಷ ನೇರಂಬಳ್ಳಿ ರಮೇಶ್ ಆಚಾರ್,ಯುವ ಘಟಕಾಧ್ಯಕ್ಷ ಕೋಟ ರಾಮಕೃಷ್ಣ ಆಚಾರ್,ಗೌರವಾಧ್ಯಕ್ಷ ಗಂಗಾಧರ ಆಚಾರ್ ಬಾರ್ಕೂರು,ಬೈಂದೂರು ವಿಶ್ವಕರ್ಮ ಸಂಘಟನೆಯ ಅಧ್ಯಕ್ಷ ನಾರಾಯಣ ಆಚಾರ್,ಶಶಿಕಾಂತ್ […]