ನಗರ ಕೇಂದ್ರ ಗ್ರಂಥಾಲಯದಲ್ಲಿ ಡಿಜಿಟಲ್ ಗ್ರಂಥಾಲಯ ಕಾರ್ಯಾಗಾರ
ಉಡುಪಿ: ಜ್ಞಾನವೃದ್ಧಿಗಾಗಿ ಗ್ರಂಥಾಲಯ ಅಗತ್ಯವಾಗಿದ್ದು, ದೇಶಕ್ಕೆ ಮಾದರಿಯಾಗಿರುವ ಉಡುಪಿ ಗ್ರಂಥಾಲಯದ ಸೌಲಭ್ಯವನ್ನು ಉಡುಪಿಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು. ದುಬಾರಿ ಶುಲ್ಕ ನೀಡಿ, ದೂರದ ಊರುಗಳಲ್ಲಿ ಐಎಎಸ್, ಕೆಎಎಸ್ ಪಡೆಯುವುದು ವಿದ್ಯಾರ್ಥಿಗಳಿಗೆ ಕಷ್ಟವಾಗುವ ನೆಲೆಯಲ್ಲಿ ಸಂಪನ್ಮೂಲ ವ್ಯಕ್ತಿಗಳನ್ನು ಇಲ್ಲಿಗೆ ಕರೆಸಿ ಕೋಚಿಂಗ್ ಶಿಬಿರಗಳನ್ನು ಆಯೋಜಿಸಬೇಕು ಎಂದು ಗ್ರಂಥಾಲಯ ಇಲಾಖೆ ಅಧಿಕಾರಿಗಳಿಗೆ ಶಾಸಕ ಕೆ. ರಘುಪತಿ ಭಟ್ ಸೂಚಿಸಿದರು. ಅವರು ಬುಧವಾರ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ […]
ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ
ಮಣಿಪಾಲ: ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]
ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಿಕೆ: ರಘುಪತಿ ಭಟ್
ಬ್ರಹ್ಮಾವರ: ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಕರಾವಳಿ ಪ್ರದೇಶದಲ್ಲಿ ಕೃಷಿ ಕಾಲೇಜು ಅತ್ಯಂತ ಅಗತ್ಯವಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದ ಅಗತ್ಯ ಮೂಲಭೂತ ಸೌಲಭ್ಯಗಳು, ವಿಜ್ಞಾನಿಗಳು, ಸಿಬ್ಬಂದಿಗಳು ಲಭ್ಯವಿದ್ದು ಶೀಘ್ರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಅವರು ಶನಿವಾರ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ […]
ಸೀತಾ ನದಿಗೆ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ
ಉಡುಪಿ: ಜಿಲ್ಲೆಯ ಉಡುಪಿ, ಕುಂದಾಪುರ ಭಾಗದಲ್ಲಿ ಹರಿಯುತ್ತಿರುವ ಸೀತಾ ನದಿಗೆ ಬ್ರಹ್ಮಾವರ ತಾಲೂಕಿನ 2 ಭಾಗದಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣಕ್ಕೆ ರೂ 311.25 ಕೋಟಿ ಮೊತ್ತದ ಯೋಜನೆಗೆ ಸೆಪ್ಟೆಂಬರ್ 14 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಮಗ್ರ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈ ಭಾಗದ ಪ್ರಮುಖ ಬೇಡಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಸಣ್ಣ ನೀರಾವರಿ ಸಚಿವರಾದ ಕೆ. […]