ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಇನ್ನಿಲ್ಲ
ಉಡುಪಿ: ಕನ್ನಡದ ಹಿರಿಯ ಸಾಹಿತಿ ಕೆ.ಶಾರದಾ ಭಟ್ ಅವರು ಕೋಟೇಶ್ವರದ ಡಾಕ್ಟರ್ ಎನ್ ಆರ್ ಆಚಾರ್ಯ ಸ್ಮಾರಕ ಆಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಪಯಣ, ಪಲಾಯನ, ಪರಿಭ್ರಮಣ, ಪದರಗಳು ಮುಂತಾದ ಕಾದಂಬರಿಗಳು, ಸಾತತ್ತೆಗೊಂದು ಸನ್ಮಾನ, ಸೆಕ್ರೆಟರ ಸಾಹೇಬರ ಹೆಂಡತಿ ಮತ್ತು ಇತರ ಕಥೆಗಳು ಹಾಗೂ ಅಸ್ತಮಾ ಕೊಂಕಣಿ ಕಾದಂಬರಿ ಸೇರಿದಂತೆ ಒಟ್ಟು ಇಪ್ಪತ್ತಕ್ಕೂ ಹೆಚ್ಚು ಕೃತಿಗಳು ಇವರ ಲೇಖನಿಯಿಂದ ಮೂಡಿ ಬಂದಿವೆ. ಅತ್ಯುತ್ತಮ ಸಂಘಟಕಿಯಾಗಿದ್ದ ಇವರು ಅಂಕಣ ಬರೆಹಗಾರ್ತಿಯಾಗಿದ್ದರು. ಹತ್ತು ವರ್ಷಗಳ ಕಾಲ ಚಡಗ ಕಾದಂಬರಿ ಪ್ರಶಸ್ತಿ […]