ಟೀಮ್ ಸಹರಾ ಉಡುಪಿ ಇದರ 3ನೇ ವಾರ್ಷಿಕೋತ್ಸವದ ಪ್ರಯುಕ್ತ ಹೊನಲು ಬೆಳಕಿನ ಕಬ್ಬಡಿ ಪಂದ್ಯಾಟ

ಉಡುಪಿ: ಟೀಮ್ ಸಹರಾ ಇವರ ಆಶ್ರಯದಲ್ಲಿ ನಡೆದ ಕಬ್ಬಡಿ ಪಂದ್ಯಾಟವನ್ನು ಕೆ ಕೃಷ್ಣಮೂರ್ತಿ ಆಚಾರ್ಯ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹರೀಶ್ ಶೆಟ್ಟಿ, ಶ್ರೀಮತಿ ಗೀತಾಂಜಲಿ ಸುವರ್ಣ, ಅಮೃತಾ ಕೃಷ್ಣ ಮೂರ್ತಿ, ನಿರೂಪಮ ಪ್ರಸಾದ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಕೀರ್ತಿ ಶೆಟ್ಟಿ, ಸಂಕಪ್ಪ ವಕೀಲರು, ಬಾಲಕೃಷ್ಣ ನಿಟ್ಟೂರು, ಉಮೇಶ್ ಕಪ್ಪೆಟ್ಟು, ನೀತಾ ಪ್ರಭು, ಸುಜಾತ ಶೆಟ್ಟಿ, ಮತ್ತು ದಿವಾಕರ್ ಸನಿಲ್ ಹಾಗೂ ತಂಡದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಬ್ಬಡಿ ಪಂದ್ಯಾಟದಲ್ಲಿ ಉಭಯ ಜಿಲ್ಲೆಯ ಪ್ರತಿಷ್ಠಿತ ತಂಡಗಳು […]

ಕಬಡ್ಡಿ ಪಂದ್ಯಾಟ: ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಸಂಯುಕ್ತ ಆಶ್ರಮದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ದವರು ಅಭಿನಂದನೆ ಸಲ್ಲಿಸಿದ್ದಾರೆ.