ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಭೇಟಿಯಾದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಕಡಬ: ಆ್ಯಸಿಡ್ ದಾಳಿಗೊಳಗಾದ ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಇಲ್ಲಿನ ಎ.ಜೆ.ಆಸ್ಪತ್ರೆಯಲ್ಲಿ ಮಂಗಳವಾರ ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4 ಲಕ್ಷ ರೂಪಾಯಿ ಚಿಕಿತ್ಸೆ ಪರಿಹಾರವಾಗಿ ಬಿಡುಗಡೆ ಮಾಡಲಾಗುತ್ತದೆ. ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ತೀವ್ರ ಗಾಯವಾಗಿದೆ. ಅವರಿಗೆ ವಾರದ […]

ಕಡಬ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

ಕಡಬ: ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಇಂದು ಬೆಳಿಗ್ಗೆ ನಡೆದ ವಿದ್ಯಾರ್ಥಿನಿಯರ ಮೇಲಿನ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಪೊಲೀಸ್ ವಶದಲ್ಲಿರುವಾತನನ್ನು ಕೇರಳದ ಮಲಪ್ಪುರಂ ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (23) ಎಂದು ಗುರುತಿಸಲಾಗಿದೆ. ಆಸಿಡ್ ದಾಳಿಗೊಳಗಾದ ಯುವತಿ ಹಾಗೂ ಆರೋಪಿ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಇದೊಂದು ಪ್ರೇಮ ಪ್ರಸಂಗಕ್ಕೆ ಸಂಬಂಧಿಸಿ ನಡೆದ ಕೃತ್ಯ ಎಂಬುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಯುವತಿಯ ಜೊತೆಗಿದ್ದ […]