ಕಡಿಯಾಳಿ ಕ್ಷೇತ್ರದಿಂದ ಸಮಾಜ ಸೇವೆಯೆ ದೇವರ ಸೇವೆ ಅಭಿಯಾನ

ಉಡುಪಿ: ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪ್ರಯುಕ್ತ ಮೇ 26 ಗುರುವಾರದಂದು ಸಾಯಂಕಾಲ 5.00 ಗಂಟೆಗೆ ಉಡುಪಿ-ಕಲ್ಸಂಕ ಸರ್ಕಲ್ ನಲ್ಲಿ ದೇವಳದ ಪ್ರಚಾರದ ಕೊಡೆ ಬಿಡುಗಡೆ ಕಾರ್ಯಕ್ರಮ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ. ಉಡುಪಿಯ ಖ್ಯಾತ ಸಮಾಜಸೇವಕರಾದ ಡಾ ಪಿ.ವಿ. ಭಂಡಾರಿ, ರವಿ ಕಟಪಾಡಿ, ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ನೀತಾ ಪ್ರಭು ಕಾಪು, ನಿತ್ಯಾನಂದ ಒಳಕಾಡು, ಶ್ರೀಮತಿ ಪೃಥ್ವಿ ಪೈ, ಈಶ್ವರ್ ಮಲ್ಪೆ ಮುಂತಾದವರ ಉಪಸ್ಥಿತಿಯಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ದೇವಳದ ಬ್ರಹ್ಮ ಕಲಶೋತ್ಸವದ […]

ಕಡಿಯಾಳಿ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನದ ಜೂನ್ 1 ರಿಂದ ಜೂನ್ 10 ತನಕ ನಡೆಯುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ನಡೆಯಿತು. ಜಗನ್ಮಾತೆ ಶ್ರೀ ಮಹಿಷಮರ್ದಿನಿಗೆ ಆಮಂತ್ರಣ ಪತ್ರಿಕೆ ಸಮರ್ಪಣೆ ಗೊಳಿಸಿದ ನಂತರ ಡ್ರೋನ್ ಮೂಲಕ ವಿಶಿಷ್ಟವಾಗಿ ವೇದಿಕೆಗೆ ಆಗಮಿಸಿದ ಆಮಂತ್ರಣ ಪತ್ರಿಕೆಯನ್ನು ಉಡುಪಿ ನಗರಸಭೆ ಅಧ್ಯಕ್ಷೆ ಶ್ರೀಮತಿ ಸುಮಿತ್ರಾ ನಾಯಕ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ನಾಗೇಶ್ ಹೆಗ್ಡೆ, ಬ್ರಹ್ಮ ಕಲಶೋತ್ಸವದ ಸಮಿತಿಯ ಅಧ್ಯಕ್ಷರಾದ ಪುರುಷೋತ್ತಮ ಪಿ […]

ಜೂನ್ 1 ರಿಂದ ಜೂನ್ 10 ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವ

ಉಡುಪಿ: ಸಮಗ್ರ ಜೀರ್ಣೋದ್ಧಾರಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಬ್ರಹ್ಮಕಲಶೋತ್ಸವವನ್ನು ಜೂನ್ 1 ರಿಂದ ಜೂನ್ 10 ರ ತನಕ ನಡೆಸಲಾಗುವುದು ಎಂದು ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಡಾ. ಕಟ್ಟೆ ರವಿರಾಜ್ ಆಚಾರ್ಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜೂನ್ 1 ಮಧ್ಯಾಹ್ನ 4:00 ಗಂಟೆಗೆ ಉಡುಪಿ ಜೋಡುಕಟ್ಟೆಯಿಂದ ಬಿರುದಾವಳಿ, ಕೀಲುಕುದುರೆ ನಾಡಿನ ಸಾಂಸ್ಕೃತಿಕ ವಿವಿಧ ತಂಡಗಳೊಂದಿಗೆ ಬೃಹತ್ ಹೊರಕಾಣಿಕೆಯ ಮೆರವಣಿಗೆ ನಡೆಸಲಾಗುವುದು. ಜೂನ್ 2 ರಂದು ಬೆಳಿಗ್ಗೆ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಭಜನಾ ಮಂಡಳಿಗಳು ಮತ್ತು […]

ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳ ಜೀರ್ಣೋದ್ಧಾರ: ವೀರೇಂದ್ರ ಹೆಗ್ಗಡೆಯವರಿಂದ ರೂ. 25 ಲಕ್ಷ ದೇಣಿಗೆ

ಉಡುಪಿ: ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಳದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ, ಪದ್ಮವಿಭೂಷಣ ರಾಜರ್ಷಿ ಡಾll ಡಿ. ವೀರೇಂದ್ರ ಹೆಗ್ಗಡೆಯವರು ರೂ. 25 ಲಕ್ಷ ದೇಣಿಗೆ ನೀಡಿದ್ದಾರೆ. ಸೋಮವಾರದಂದು ಸಮಗ್ರ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಶಾಸಕ ಕೆ. ರಘುಪತಿ ಭಟ್ ಹಾಗೂ ದೇವಸ್ಥಾನದ ಮಂಡಳಿಗೆ ದೇಣಿಗೆಯ ಚೆಕ್ ಅನ್ನು ಹೆಗ್ಗಡೆಯವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಸದಸ್ಯರಾದ ಮಂಜುನಾಥ್ ಹೆಬ್ಬಾರ್, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಸದಸ್ಯರಾದ ಗಿರೀಶ್ […]

ಕಡಿಯಾಳಿ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕೆಸರುಗದ್ದೆ ಕ್ರೀಡಾಕೂಟ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಕಡಿಯಾಳಿ ದೇವಸ್ಥಾನ ವಠಾರದಲ್ಲಿ ಭಾನುವಾರ ‘ಕೆಸರು ಗದ್ದೆ’ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಲಾಯಿತು. ಗದ್ದೆಗೆ ಇಳಿದ ನೂರಾರು ಮಂದಿ ಕೆಸರು ನೀರಿನಲ್ಲಿ ಮಿಂದೆದ್ದರು. ಒಬ್ಬರ ಮೇಲೊಬ್ಬರು ಕೆಸರು ಎರಚಿಕೊಂಡು ಸಂಭ್ರಮಿಸಿದರು. ಹಿರಿಯರು ಕಿರಿಯರೊಂದಿಗೆ ಸೇರಿಕೊಂಡು ಕೆಸರಿನಲ್ಲಿ ಕೆಲ ಸಮಯ ಕಳೆದರು. ಕಡಿಯಾಳಿ ದೇಗುಲದ ವಠಾರದ ಗದ್ದೆಯಲ್ಲಿ ಗ್ರಾಮೀಣ ಸೊಗಡು ಅನಾವರಣಗೊಂಡಿತ್ತು. ಕ್ರೀಡಾಕೂಟದ ಅಂಗವಾಗಿ ಹಗ್ಗಜಗ್ಗಾಟ, ವಾಲಿಬಾಲ್‌, ಕೆಸರು ಗದ್ದೆ ಓಟ, ಹಿಮ್ಮುಖ ಓಟ, ಹಾಳೆ ಎಳೆತ, ಜೋಡಿ ಓಟ, […]