ಕದ್ರಿ ಲಯನ್ಸ್ ಕನ್ನಡ ರತ್ನ ಪ್ರಶಸ್ತಿಗೆ ಕಾದಂಬರಿಕಾರ ವಿವೇಕಾನಂದ ಕಾಮತ್ ಆಯ್ಕೆ
ಮಂಗಳೂರು: ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳನೊಳಗೊಂಡ ಲಯನ್ಸ್ ಜಿಲ್ಲೆ 317ಡಿಯ ಲಯನ್ಸ್ ಕ್ಲಬ್ ಕದ್ರಿ ಹಿಲ್ಸ್ ಪ್ರತಿ ವರ್ಷ ಕನ್ನಡದ ಯುವ ಸಾಹಿತಿಗಳು, ಸಾಂಸ್ಕೃತಿಕ ಸಾಧಕರು, ಸಂಘಟಕರಿಗೆ ನೀಡುವ ಕದ್ರಿ ಲಯನ್ಸ್ ಕನ್ನಡ ರತ್ನ (ಕಲಕ) ಪ್ರಶಸ್ತಿಯ 2022ನೇ ಸಾಲಿಗೆ ಸಾಹಿತಿ, ಕಾದಂಬರಿಕಾರ ವಿವೇಕಾನಂದ ಕಾಮತ್ ಇವರು ಆಯ್ಕೆಯಾಗಿದ್ದಾರೆ. ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವೀಧರರಾಗಿರುವ ಇವರು, 1998ರಿಂದ ಬರವಣಿಗೆಯಲ್ಲಿ ತೊಡಗಿಸಿಕೊಂಡು 150ಕ್ಕೂ ಹೆಚ್ಚು ಕಥೆಗಳನ್ನು ಬರೆದಿದ್ದಾರೆ. ಮುಖ್ಯವಾಗಿ ಕನ್ನಡದ ಬಹುತೇಕ ಪತ್ರಿಕೆಗಳಲ್ಲಿ ಇವರ […]