ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ: ಇಬ್ಬರು ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಎನ್‌ಐಎ
ಮಂಗಳೂರು: ಕಳೆದ ವರ್ಷ ನವೆಂಬರ್‌ನಲ್ಲಿ ಮಂಗಳೂರಿನಲ್ಲಿ ಇಸ್ಲಾಮಿಕ್ ಸ್ಟೇಟ್ ಪ್ರಾಯೋಜಿತ ಪ್ರೆಶರ್ ಕುಕ್ಕರ್ ಬಾಂಬ್ ಸ್ಫೋಟದ ಇಬ್ಬರು ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರದಂದು ಚಾರ್ಜ್‌ಶೀಟ್ ಸಲ್ಲಿಸಿರುವುದಾಗಿ ಎ.ಎನ್.ಐ ವರದಿ ಮಾಡಿದೆ. ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಶಾರಿಕ್ 2022 ರ ನವೆಂಬರ್ 19 ರಂದು ಆಟೊ ರಿಕ್ಷಾದಲ್ಲಿ ಪ್ರೆಶರ್ ಕುಕ್ಕರ್ ಐಇಡಿ ಅನ್ನು ಒಯ್ಯುತ್ತಿದ್ದಾಗ ಅದು ಸ್ಫೋಟಗೊಂಡಿತ್ತು. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಹಿಂದೂ ಸಮುದಾಯದಲ್ಲಿ ಭಯ ಹುಟ್ಟಿಸುವ ಉದ್ದೇಶದಿಂದ ಈತ ಐಇಡಿ ಸ್ಥಾಪಿಸಲು […]