ಉಡುಪಿ:ಕಾಡುಗೊಲ್ಲ ಅಭಿವೃದ್ಧಿ ನಿಗಮ – ಸಾಲ, ಸಹಾಯಧನ ಸೌಲಭ್ಯ : ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಡಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕುಗಳಸಹಯೋಗದೊಂದಿಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ವಿದೇಶ ವ್ಯಾಸಂಗ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ […]