ಕೈವಾರ ತಾತಯ್ಯ, ಜಗದ್ಗುರು ರೇಣುಕಾಚಾರ್ಯ ಜಯಂತಿ
ಉಡುಪಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಗದ್ಗುರು ರೇಣುಕಾಚಾರ್ಯ ಮತ್ತು ಕೈವಾರ ತಾತಯ್ಯ ಜಯಂತಿ ಆಚರಣೆಯು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಇಲಾಖೆ ವತಿಯಿಂದ ಆಚರಿಸಲಾಗುವ ಎಲ್ಲಾ ಮಹನೀಯರು, ದಾರ್ಶನಿಕರು, ತತ್ವ ಜ್ಞಾನಿಗಳು, ವಚನಕಾರರ ಬದುಕು ಹಾಗೂ ಮಾರ್ಗದರ್ಶನಗಳು ನಮ್ಮೆಲ್ಲರ ಜೀವನಕ್ಕೆ ಪ್ರೇರಣೆ ಎಂದರು. ಜಂಗಮ ಮಠದ ಡಾ. […]