ಜ.22: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗದ ವತಿಯಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನ
ಮಂಗಳೂರು: ಬಳ್ಕೂರು ಯಕ್ಷ ಕುಸುಮ ಪ್ರತಿಷ್ಠಾನ ಮತ್ತು ಕಲಾಸ್ತಕರ ಬಳಗ, ಕೊಡಿಯಾಲ್ ಬೈಲ್ ಮಂಗಳೂರು ಇವರ ಆಶ್ರಯದಲ್ಲಿ ಶ್ರೀಕ್ಷೇತ್ರ ಕುದ್ರೋಳಿ ಭಗವತೀ ದೇವಸ್ಥಾನ ಮತ್ತು ರಂಗಸ್ಥಳ ಮಂಗಳೂರು ಇವರ ಪ್ರೋತ್ಸಾಹದೊಂದಿಗೆ ಮಂಗಳೂರಿನಲ್ಲಿ ಪ್ರಥಮ ಬಾರಿಗೆ ಇದೇ ಬರುವ ಜನವರಿ ೨೨ ರಂದು ಸಂಜೆ ೪ ರಿಂದ ರಾತ್ರಿ ೧೦ ರವರೆಗೆ ಬಡಗು ತಿಟ್ಟಿನ ಪ್ರಸಿದ್ಧ ಯಕ್ಷಗಾನ ಮೇಳವಾಗಿರುವ ಶ್ರೀಕ್ಷೇತ್ರ ಹಟ್ಟಿಯಂಗಡಿ ಮೇಳ, ಇವರಿಂದ ಕಾಲಮಿತಿ ಯಕ್ಷಗಾನ ಪ್ರದರ್ಶನವಾಗಿ ‘ಕೃಷ್ಣ ಗಾರುಡಿ’ ಮತ್ತು ‘ಜಾಂಬವತಿ’ ಎಂಬ ಕಥಾನಕ ಪ್ರದರ್ಶನವು […]