ಕಳತ್ತೂರು ಅಂಗನವಾಡಿಯಲ್ಲಿ ಪೋಷಣೆ ಅಭಿಯಾನ ಕಾರ್ಯಕ್ರಮ
ಕಳತ್ತೂರು: ಗ್ರಾಮದ 3 ಅಂಗನವಾಡಿ ಕೇಂದ್ರದ ಪೋಷಣೆ ಅಭಿಯಾನ ಕಾರ್ಯಕ್ರಮ ಕಳತ್ತೂರು ಅಂಗನವಾಡಿಯಲ್ಲಿ ನಡೆಯಿತು. ಪೋಷಣೆ ಅಭಿಯಾನ ಕಾರ್ಯಕ್ರಮದಲ್ಲಿ ಮೊಳಕೆ ಬರಿಸಿದ ಹೆಸರುಕಾಳು, ಪೌಷ್ಟಿಕ ಆಹಾರ, ತರಕಾರಿ -ಸೊಪ್ಪುಗಳಿಂದ ಸಿಗುವಂತಹ ಪ್ರಯೋಜನಗಳ ಮಾಹಿತಿ ನೀಡಲಾಯಿತು. ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಮಾಜ ಸೇವಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫಾರೂಕ್ ಚಂದ್ರನಗರ ಮಾತನಾಡಿ, ಕಳತ್ತೂರು ಅಂಗನವಾಡಿಯವರ ಕೆಲಸ ಶ್ಲಾಘನಿಯ ಇವರ ಸಮಾಜ ಮುಖಿ ಕೆಲಸ ದೇವರು ಮೆಚ್ಚುವಂತಹದು ಎಂದರು. ಈ […]