ಕಲ್ಲೇಗ ಟೈಗರ್ಸ್ ಹುಲಿವೇಷ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳು ಶರಣು

ಪುತ್ತೂರು: ಇಲ್ಲಿನ ನವರಾತ್ರಿ ಹುಲಿವೇಷ ತಂಡವಾದ ಕಲ್ಲೇಗ ಟೈಗಸ್೯ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ಸೋಮವಾರ ಮಧ್ಯರಾತ್ರಿ ಪುತ್ತೂರು ಹೊರ ವಲಯದ ನೆಹರೂ ನಗರದಲ್ಲಿ ತಲವಾರಿನಿಂದ ಕಡಿದು ಬರ್ಬರವಾಗಿ ಕೊಲೆ ಮಾಡಿರುವ ಪ್ರಕರಣ ಕರಾವಳಿಯನ್ನು ಬೆಚ್ಚಿಬೀಳಿಸಿದೆ. ನೆಹರೂ ನಗರದ ವಿವೇಕಾನಂದ ಕಾಲೇಜು ರಸ್ತೆಯಲ್ಲಿ ಮಧ್ಯರಾತ್ರಿ ಅಕ್ಷಯ್ ಮೇಲೆ ತಂಡವೊಂದು ದಾಳಿ ಮಾಡಿದೆ. ಮಾತುಕತೆಗೆ ಬರಲು ಹೇಳಿ ದಾಳಿ ಮಾಡಲಾಗಿದೆ ಎಂಬ ಅಂಶ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ […]