ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವ: ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆಗೆ ರಘುಪತಿ ಭಟ್ ರಿಂದ ಚಾಲನೆ
ಉಡುಪಿ: ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಸಂದರ್ಭ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಆದಿವುಡುಪಿ ಜಂಕ್ಷನ್ ನಿಂದ ಕಲ್ಮಾಡಿ ಚರ್ಚಿನವರೆಗೆ ನಡೆಯಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ಹೊಸ ವರುಷದಂದು ಕಲ್ಮಾಡಿ ಚರ್ಚಿಗೆ ಭೇಟಿ ನೀಡುತ್ತಿದ್ದನ್ನು ಅವರು ನೆನಪಿಸಿಕೊಂಡರು. ಉಡುಪಿ ಧರ್ಮಕ್ಷೇತ್ರದಲ್ಲಿ ಅತ್ತೂರು, ಕೆರೆಕಟ್ಟೆ ಬಳಿಕ […]
ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವಾಗಿ ಘೋಷಣೆಯಾಗಲಿದೆ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರ
ಉಡುಪಿ: ಆಗಸ್ಟ್ 15 ರಂದು ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮಾಡಲಾಗುವುದು ಮತ್ತು ಚರ್ಚಿನ ಸುವರ್ಣಮಹೋತ್ಸವವನ್ನು ಆಚರಿಸಲಾಗುವುದು ಎಂದು ಚರ್ಚಿನ ಧರ್ಮಗುರುಗಳಾದ ವಂ. ಬ್ಯಾಪ್ಟಿಸ್ಟ್ ಮಿನೇಜಸ್ ಹೇಳಿದರು. ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾಹಿತಿ ನೀಡಿದ ಅವರು, ಕಲ್ಮಾಡಿಯಲ್ಲಿರುವ ವೆಲಂಕಣಿ ಮಾತೆಯ ಕೇಂದ್ರವು ಪ್ರಪಂಚಾದಾದ್ಯಂತ ಬಹಳ ಪ್ರಸಿದ್ದವಾಗಿದ್ದು ವೆಲಂಕಣಿ ಮಾತೆಯ ಪ್ರತಿಮೆಯನ್ನು 1988 ಅಗಸ್ಟ್ 15 ರಂದು ಉಡುಪಿ ಚರ್ಚ್ ನಿಂದ ಮೆರವಣಿಗೆಯಲ್ಲಿ ತರಲಾಯಿತು. ಈ ಪ್ರತಿಮೆಯನ್ನು ವಂ ವಿಲ್ಸನ್ ಡಿಸೋಜಾ […]