ಆ.15 ರಂದು ಕಲ್ಮಾಡಿ ವೆಲಂಕಣಿ ಮಾತೆಯ ವಾರ್ಷಿಕ ಮಹೋತ್ಸವ
ಕಲ್ಮಾಡಿ ವೆಲಂಕಣಿ ಮಾತೆಯ ಪುಣ್ಯಕ್ಷೇತ್ರವು ಪ್ರಪಂಚದಾದ್ಯಂತ ಬಹಳ ಪ್ರಸಿದ್ಧವಾಗಿದೆ. ವೆಲಂಕಣಿ ಮಾತೆಯ ಪ್ರತಿಮೆಯನ್ನು ತಮಿಳುನಾಡಿನ ವೆಲಂಕಣಿ ಪುಣ್ಯಕ್ಷೇತ್ರದಿಂದ ತಂದು ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ದೇವಾಲಯದಲ್ಲಿ ಅಗಸ್ಟ್ 15, 1988 ರಲ್ಲಿ ಅಂದಿನ ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿದ್ದ ಅತೀ ವಂದನೀಯ ಡಾ. ಬಾಸಿಲ್ ಡಿʼಸೋಜಾ ರವರು ಪ್ರತಿಷ್ಠಾಪಿಸಿದರು. ಅಂದಿನಿಂದ ಇಂದಿನವರೆಗೂ ವೆಲಂಕಣಿ ಮಾತೆಯ ಸ್ಮರಣೆ ನಿರಂತರವಾಗಿ ಈ ಕೇಂದ್ರದಲ್ಲಿ ನಡೆಯುತ್ತಿದೆ ಹಾಗೂ ಪ್ರತಿದಿನ ಹಲವಾರು ಭಕ್ತಾದಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದು ಅನೇಕ ಪವಾಡಗಳಿಗೆ ಸಾಕ್ಷಿಯಾಗಿದೆ. ಸ್ಟೆಲ್ಲಾ ಮಾರಿಸ್ ದೇವಾಲಯ […]
ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರ ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ
ಉಡುಪಿ: ವಿಶ್ವ ಪ್ರಸಿದ್ದ ಕಲ್ಮಾಡಿ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಅಧಿಕೃತ ಪುಣ್ಯಕ್ಷೇತ್ರವೆಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಅತಿ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋರವರು ಆಗಸ್ಟ್ 15 ರಂದು ವಿದ್ಯುಕ್ತವಾಗಿ ನಡೆದ ಪವಿತ್ರ ಬಲಿಪೂಜೆಯಲ್ಲಿ ಘೋಷಿಸಿದರು. ಉಡುಪಿ ಧರ್ಮಪ್ರಾಂತ್ಯದ ಕುಲಪತಿಗಳಾದ ಫಾದರ್ ಸ್ಟ್ಯಾನಿ ಬಿ ಲೋಬೋ ಅವರು ಪುಣ್ಯಕ್ಷೇತ್ರದ ಘೋಷಣೆ ಪತ್ರವನ್ನು ವಾಚಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯರಾದ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋ ರವರು ದಿವ್ಯ ಬಲಿಪೂಜೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಬಲಿಪೂಜೆಯಲ್ಲಿ ಮಂಗಳೂರು […]
ಕಲ್ಮಾಡಿಯಲ್ಲಿನ ವೆಲಂಕಣಿ ಮಾತೆಯ ಕೇಂದ್ರವನ್ನು ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆ ಮತ್ತು ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಆಚರಣೆ
ಕಲ್ಮಾಡಿಯ ಸ್ಟೆಲ್ಲಾ ಮಾರಿಸ್ ಚರ್ಚ್ ಕರಾವಳಿ ಕರ್ನಾಟಕದ ಭಕ್ತರಿಗೆ ಚಿರಪರಿಚಿತ ಮತ್ತು ಎಲ್ಲಾ ಧರ್ಮದ ಜನರು ಭೇಟಿ ನೀಡುವ ಸ್ಥಳವಾಗಿದೆ. ಮಲ್ಪೆ- ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬಲ ಭಾಗದಲ್ಲಿರುವ ಚರ್ಚ್ ರಾಷ್ಟ್ರೀಯ ಹೆದ್ದಾರಿ 66 (ಕರಾವಳಿ ಬೈ-ಪಾಸ್) ನಿಂದ ಕೇವಲ 3 ಕಿಮೀ ದೂರದಲ್ಲಿದೆ. ಅರಬ್ಬಿ ಸಮುದ್ರಕ್ಕೆ ಸಮೀಪದಲ್ಲಿರುವ ಈ ಚರ್ಚ್ ಅನ್ನು’ಸ್ಟೆಲ್ಲಾಮಾರಿಸ್’ ಅಂದರೆ ‘ಸಮುದ್ರದತಾರೆ’ ಎಂದು ಕರೆಯುತ್ತಾರೆ. ಮೊದಲು, ಕಲ್ಮಾಡಿಯ ಜನರು ತಮ್ಮ ಆಧ್ಯಾತ್ಮಿಕ ಅಗತ್ಯತೆಗಳಿಗಾಗಿ ತೊಟ್ಟಂ ಅಥವಾ ಉಡುಪಿಯ ಚರ್ಚಿಗೆ ಭೇಟಿ ನೀಡಬೇಕಾಗಿತ್ತು. ಹೀಗಾಗಿ […]
ಕಲ್ಮಾಡಿ: ಆಗಸ್ಟ್ 15 ರಂದು ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಸಂಭ್ರಮಾಚಣೆ
ಉಡುಪಿ: ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ 50 ನೇ ವಾರ್ಷಿಕೋತ್ಸವದ ಅಂಗವಾಗಿ ಆಗಸ್ಟ್ 15 ರಂದು ಸೋಮವಾರ ಬೆಳಗ್ಗೆ 09.00 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆಯಾಗಲಿದ್ದು, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಅಧಿಕೃತ ಘೋಷಣೆ ಮಾಡಲಿದ್ದಾರೆ. ಆಗಸ್ಟ್ 6 ರಿಂದ 14 ರ ವರೆಗೆ ಸಂಜೆ 4 ಗಂಟೆಗೆ ಆರಾಧನೆ, ಬಲಿಪೂಜೆ, ನೊವೆನಾ ಪ್ರಾರ್ಥನೆ ಮತ್ತು ವ್ಯಾಧಿಗ್ರಸ್ತರಿಗಾಗಿ ಪ್ರಾರ್ಥನೆ ಜರುಗಲಿದೆ. ಆಗಸ್ಟ್ 15 ಸೋಮವಾರದಂದು ಬೆಳಗ್ಗೆ 10.00 ಗಂಟೆಗೆ ಬಲಿಪೂಜೆ […]