ಕಲ್ಯಾಣಪುರ: ನ. 28ರಿಂದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹ
ಕಲ್ಯಾಣಪುರ: ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹ ನವೆಂಬರ್ 28ರಿಂದ ಆರಂಭಗೊಂಡು ಡಿಸೆಂಬರ್ 5 ರವರೆಗೆ ನಡೆಯಲಿದ್ದು ಅಹೋರಾತ್ರಿ ಭಜನಾ ಕಾರ್ಯಕ್ರಮ ನೆರವೇರಲಿದೆ. ನ.28 ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆಯ ಬಳಿಕ ದೀಪ ಪ್ರಜ್ವಲನೆಯೊಂದಿಗೆ ಭಜನಾ ಮಹೋತ್ಸವ ಆರಂಭಗೊಳ್ಳಲಿದೆ. ದೇವರಿಗೆ ವಿಶೇಷ ಹೂವಿನ ಅಲಂಕಾರ, ಪ್ರತಿದಿನ ರಾತ್ರಿ ಪೇಟೆ ಉತ್ಸವ ಜರುಗಲಿದೆ. ಪ್ರತಿದಿನ ಸಂಜೆ 6 ರಿಂದ 8 ಗಂಟೆಯವರೆಗೆ ಆಹ್ವಾನಿತ ಅತಿಥಿ ಕಲಾವಿದರಿಂದ ಭಕ್ತಿ ಸಂಗೀತ ಕಾರ್ಯಕ್ರಮವಿರಲಿದೆ. ಸೋಮವಾರ […]
ಕಲ್ಯಾಣಪುರ: ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ
ಕಲ್ಯಾಣಪುರ: ಇಲ್ಲಿನ ಶ್ರೀ ರಾಮಾಂಜನೇಯ ದೇವಸ್ಥಾನದ ಟ್ರಸ್ಟ್ ವತಿಯಿಂದ ಆದಿತ್ಯವಾರದಂದು ಲಕ್ಷ ತುಳಸಿ ಅರ್ಚನೆ ಹಾಗೂ ಲಕ್ಷ ಕುಂಕುಮಾರ್ಚನೆ ನಡೆಯಿತು. ಅರ್ಚಕಶ್ರೀಕಾಂತ್ ಅವಧಾನಿಯವರ ಮಾರ್ಗದರ್ಶನ ದಲ್ಲಿ ಧಾರ್ಮಿಕ ಪೂಜಾ ವಿಧಾನಗಳು ನಡೆದವು. ಕಾಶೀನಾಥ ಭಟ್, ಸೀತಾರಾಮ್ ಭಟ್, ಗಣಪತಿ ಭಟ್, ಮಹೇಶ್ ಭಟ್, ಗಣೇಶ ಭಟ್, ಶ್ರೀಕರ್ ಭಟ್, ಪವನ್ ಭಟ್ ಸಹಕಾರ ನೀಡಿದರು. ಟ್ರಸ್ಟಿನ ಮಹಿಳಾ ಸದಸ್ಯರಿಂದ ಲಕ್ಷ ಕುಂಕುಮಾರ್ಚನೆ ಮತ್ತು ಭಜನಾ ಕಾರ್ಯಕ್ರಮ ಜರುಗಿತು. ಮಹಾ ಪೂಜೆ ಬಳಿಕ ಪ್ರಸಾದ ವಿತರಣೆ ನಡೆಯಿತು. ನೂರಾರು […]