ಕಮಲಶಿಲೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.29-ಅ8ರ ವರೆಗೆ ಸಂಭ್ರಮದ ನವರಾತ್ರಿ ಉತ್ಸವ
ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆಯ ಶ್ರೀ ಬ್ರಾಹ್ಮೀ ದುರ್ಗಾಪರಮೇಶ್ವರಿ ನವರಾತ್ರಿ ಉತ್ಸವವು ಶ್ರೀವಿಕಾರಿ ನಾಮಸಂವತ್ಸರದ ಅಶ್ವಯುಜ ಶುದ್ಧ ಪ್ರತಿಪದಿ ಸೆಪ್ಟೆಂಬರ್ 29ರಿಂದ ಪ್ರಾರಂಭಗೊಂಡು ಅಶ್ವಯುಜ ಶುದ್ಧ ದಶಮಿ ಅಕ್ಟೋಬರ್ 8ರವರೆಗೆ ನಡೆಯಲಿದೆ. ಈ ಪುಣ್ಯ ಕಾರ್ಯದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನವರಾತ್ರಿಯ ಪ್ರಯುಕ್ಯ ಪ್ರತಿದಿನ ತ್ರಿಕಾಲ ಪೂಜೆ, ನವರಾತ್ರಿ ವಿಶೇಷ ಪೂಜೆ, ಮಹಾಪೂಜೆ, ಸುತ್ತುಬಲಿ ನಡೆಯುತ್ತದೆ. ಅ.5ರಂದು ರಾತ್ರಿ ಶಾರದಾ ದೇವಿಯ ಪ್ರತಿಷ್ಠಾಪನಾ ಕಾರ್ಯ ಹಾಗೂ ವಿಶೇಷ ಪೂಜಾ ಕೈಂಕರ್ಯಗಳಿವೆ. ಅ. […]