ಇತಿಹಾಸದಲ್ಲೆ ಮೊದಲ ಬಾರಿ ಬೆಂಗಳೂರಿನಲ್ಲಿ ನಡೆಯಲಿದೆ ಕಂಬಳ..!
ಬೆಂಗಳೂರು: ಬೆಂಗಳೂರಿನಲ್ಲಿ ಕಂಬಳದ ಇತಿಹಾಸದಲ್ಲಿ ಮೊದಲ ಬಾರಿಗೆ, ರಾಜ ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜೋಡುಕೆರೆ ಕಂಬಳ ನಡೆಯಲಿದ್ದು, ತುಳುನಾಡಿನ ಕಂಬಳದ ಕೋಣಗಳು ಬೆಂಗಳೂರಿನ ಕಡೆಗೆ ಹೊರಡಲಿದೆ. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನಡೆಯಲಿರುವ ಈ ಕಂಬಳಕ್ಕೆ ಮೈಸೂರು ಅರಸರಿಂದ ಅನುಮತಿ ದೊರೆತಿದೆ. ಕರಾವಳಿ ಕರ್ನಾಟಕದ ಬೇಸಾಯ ವೃತ್ತಿಯೇ ಪ್ರಮುಖವಾಗಿರುವ ಸಮಾಜದಲ್ಲಿ ಕೋಣಗಳು ಅವರ ಬದುಕಿನ ಅವಿಭಾಜ್ಯ ಅಂಗ. ‘ಕಂಬಳ, ಬೇಸಾಯಗಾರರು ಭತ್ತದ ಗದ್ದೆಗಳಲ್ಲಿ ಕೊಯ್ಲಿನ ಬಳಿಕ ಕೋಣಗಳನ್ನು ಓಡಿಸುತ್ತಿದ್ದ ಆಚರಣೆ ಮತ್ತು ಆಟವಷ್ಟೇ […]