ಜ. 22 ರಂದು ರಾಜ್ಯದಲ್ಲಿ ಶಾಲೆಗಳಿಗೆ ರಜೆ ಇಲ್ಲ: ಶಿಕ್ಷಣ ಇಲಾಖೆ ಸ್ಪಷ್ಟನೆ

ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ಜನವರಿ 22 ರಂದು ಶಾಲೆಗಳಿಗೆ ರಜೆ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ನಾವು ಜನವರಿ 22 ರಂದು ಶಾಲೆಗಳಿಗೆ ರಜೆ ಘೋಷಿಸುತ್ತಿಲ್ಲ. ಅದು ಕೆಲಸದ ದಿನವಾಗಿರುತ್ತದೆ. (ಬೆಂಗಳೂರು) ನಗರ ಅಥವಾ ರಾಜ್ಯದಲ್ಲಿ ಯಾವುದೇ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿ ಉಂಟಾದರೆ, ಆಯಾ ಜಿಲ್ಲಾಧಿಕಾರಿಗಳು ರಜೆ ಘೋಷಿಸಲು ಕರೆ ನೀಡುತ್ತಾರೆ” ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಗುರುವಾರ ತಿಳಿಸಿರುವುದಾಗಿ ದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಹೇಳಿದೆ. ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್ ಆಫ್ ಸ್ಕೂಲ್ಸ್ […]