‘ಕಾಣದ ಕಡಲಿಗೆ’ ಕಿರುಚಿತ್ರದ ಟ್ರೈಲರ್ ಬಿಡುಗಡೆ: ಜನರಿಂದ ಉತ್ತಮ ಪ್ರತಿಕ್ರಿಯೆ

ಉಡುಪಿ: ಶ್ರಾವಣಿ ಪ್ರೊಡಕ್ಷನ್ ಅರ್ಪಿಸುವ ಮೋಹನ್ ಕುಮಾರ್ ಕೆದೂರು ನಿರ್ಮಾಣ ಹಾಗೂ ನಿರ್ದೇಶನದ ‘ಕಾಣದ ಕಡಲಿಗೆ’ ಕಿರುಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಪರ್ಕಳ ಹಾಗೂ ಸುತ್ತಮುತ್ತಲಿನ ಸುಂದರ ಪ್ರದೇಶಗಳಲ್ಲಿ ಚಿತ್ರದ ದೃಶ್ಯಗಳನ್ನು ಚಿತ್ರೀಕರಣ ಮಾಡಲಾಗಿದೆ. ನಾಯಕ ಅಂಧ ಹುಡುಗಿಯೊಬ್ಬಳನ್ನು ಪ್ರೀತಿಸುವ ಕಥಾಹಂದರವನ್ನು ಚಿತ್ರ ಒಳಗೊಂಡಿದೆ. ಮೋಹನ್ ನಿರ್ದೇಶನದ ಜತೆಗೆ ನಾಯಕ ನಟನಾಗಿ ಪಾತ್ರ ನಿರ್ವಹಿಸಿದ್ದಾರೆ. ಈ ಕಿರುಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳು ನಡೆಯುತ್ತಿವೆ. ಎರಡು ದಿನಗಳ […]