ಹರ್ ಘರ್ ತಿರಂಗಾ ಅಭಿಯಾನ: ತ್ರಿವರ್ಣದ ಬೆಳಕಲ್ಲಿ ಕನಕ ಗೋಪುರ ಝಗಮಗ

ಉಡುಪಿ: ಇಲ್ಲಿನ ರಥಬೀದಿಯ ಕನಕ ಗೋಪುರ ತ್ರಿವರ್ಣಗಳಿಂದ ಝಗಮಗಿಸುತ್ತಿದೆ. ರಾಷ್ಟ್ರಧ್ವಜದ ಮೂರು ಬಣ್ಣಗಳಾದ ಕೇಸರಿ, ಬಿಳಿ ಮತ್ತು ಹಸಿರು ವರ್ಣದಲ್ಲಿ ಶೋಭಿಸುತ್ತಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಪರ್ಯಾಯ ಕೃಷ್ಣಾಪುರ ಶ್ರೀಕೃಷ್ಣ ಮಠ ಆಶ್ರಯದಲ್ಲಿ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಡುಪಿ ವಲಯ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಮತ್ತು ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಕೃಷ್ಣ ಮಠದ ಕನಕ ಗೋಪುರ ತ್ರಿವರ್ಣದೊಂದಿಗೆ ಝಗಮಗಿಸುವಂತೆ ಮಾಡಲಾಗಿದ್ದು, ಶನಿವಾರದಿಂದ ಸೋಮವಾರ ವರೆಗೆ ಪ್ರತಿದಿನ ಸಂಜೆ 6.30ರಿಂದ ರಾತ್ರಿ 10ರ ವರೆಗೆ ವಿಶೇಷ […]

ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೂತನ ಪರಿಕಲ್ಪನೆ: ತ್ರಿವರ್ಣದ ಬೆಳಕಿನ ರಂಗಲ್ಲಿ ಮಿಂದೇಳಲಿದೆ ಕನಕ ಗೋಪುರ!!

ಉಡುಪಿ: ಶ್ರೀಕೃಷ್ಣ ಮಠ ಹಾಗೂ ಪರ್ಯಾಯ ಶ್ರೀ ಕೃಷ್ಣಾಪುರ ಮಠ ಉಡುಪಿ ಆಶ್ರಯದಲ್ಲಿ ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯದ ನೇತೃತ್ವದಲ್ಲಿ ಪಂಚಮಿ ಟ್ರಸ್ಟ್ ಹಾಗೂ ಗಾಂಧಿ ಹಾಸ್ಪಿಟಲ್ ಸಹಯೋಗದೊಂದಿಗೆ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಪ್ರಥಮ ಬಾರಿಗೆ ಉಡುಪಿಯ ರಥಬೀದಿಯಲ್ಲಿರುವ ಕನಕ ಗೋಪುರವು “ತ್ರಿವರ್ಣ” ಬಣ್ಣದ ಬೆಳಕಿನೊಂದಿಗೆ ಝಗಮಗಗೊಳ್ಳಲಿದೆ. ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜುಲೈ 13 ಶನಿವಾರದಂದು 6 ಗಂಟೆಗೆ ಕನಗೋಪುರದ ಎದುರು ಉದ್ಘಾಟನೆ […]