ಆ.24 ರಂದು ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಬೃಹತ್ ಪ್ರತಿಭಟನೆ

ಉಡುಪಿ: ಪಡುಬಿದ್ರಿ- ಕಾರ್ಕಳ ರಾಜ್ಯ ಹೆದ್ದಾರಿ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಗೇಟ್ ವಿರುದ್ಧ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಇದೇ ಆ.24ರಂದು ಬೆಳಿಗ್ಗೆ 9.30ಕ್ಕೆ ಪಡುಬಿದ್ರೆ ಸಮೀಪದ ಕಂಚಿನಡ್ಕದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೋರಾಟ ಸಮಿತಿಯ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ತಿಳಿಸಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ‌ ಮಾತನಾಡಿದ ಅವರು, ಈ ಹೆದ್ದಾರಿಯಲ್ಲಿ ಕಳೆದ 11 ವರ್ಷದ ಹಿಂದೆ ರಾಜ್ಯ ಸರಕಾರದ ನಿಧಿಯಿಂದ 61 ಕೋಟಿ ರೂ […]