ಸರಕಾರಿ ಕಚೇರಿಗಳಲ್ಲಿ ನೂರಕ್ಕೆ ನೂರರಷ್ಟು ಕನ್ನಡಾನುಷ್ಠಾನ ಕಡ್ಡಾಯ: ಡಾ.ಟಿ.ಎಸ್.ನಾಗಾಭರಣ
ಉಡುಪಿ: ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಹೇಳಿದರು. ಅವರು ಮಂಗಳವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. […]