ಎರಡನೇ ರಾಜ್ಯ ಭಾಷೆಯಾಗಿ ತುಳು; ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚನೆ: ಶಿವರಾಜ ತಂಗಡಗಿ
ಬೆಂಗಳೂರು: ಕರ್ನಾಟಕದ ಎರಡನೇ ರಾಜ್ಯ ಭಾಷೆಯಾಗಿ ತುಳುವನ್ನು ಪರಿಗಣಿಸಲು ಅಗತ್ಯ ಮಾಹಿತಿ ಸಂಗ್ರಹಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದರು. ಪರಿಷತ್ತಿನಲ್ಲಿ ಜೆಡಿಎಸ್‌ನ ಬಿ.ಎಂ.ಫಾರೂಕ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ, ವರದಿ ನೀಡಲು ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ಹಿಂದೆ ಸಮಿತಿ ರಚಿಸಲಾಗಿತ್ತು. ತುಳು ಭಾಷೆಯ ಸ್ವರೂಪ, ಇತಿಹಾಸ, ಸಾಹಿತ್ಯ, ಪರಂಪರೆ, ಲಿಪಿ, ಶಾಸನಗಳ […]
ಮಾತೃ ಭಾಷೆ ತುಳು ಎಂದು ನಮೂದಿಸಿ ತುಳು ಕೋಟಾದಲ್ಲಿ ಸೀಟು ಗಳಿಸಿ: ಜಯಕರ್ ಶೆಟ್ಟಿ ಇಂದ್ರಾಳಿ
ಉಡುಪಿ: ಉಸಿರು ನಿಂತರೂ ಹೆಸರು ಉಳಿಸುವ ಕಾರ್ಯಕ್ರಮವನ್ನು ತುಳುಕೂಟವು ನಿರಂತರವಾಗಿ ಮಾಡುತ್ತಿದೆ. ಒಳ್ಳೆ ಕೆಲಸ ಮಾಡಿದವರ ಹೆಸರು ಅಜರಾಮರವಾಗಿರಬೇಕು. ಶಾಲೆಗೆ ಸೇರಿಸುವಾಗ ಮಾತೃ ಭಾಷೆ ತುಳು ಎಂದು ನಮೂದಿಸಿದಲ್ಲಿ ಹತ್ತು ವರ್ಷದ ಬಳಿಕ ತುಳು ಕೋಟಾದಲ್ಲಿ ಸೀಟು ಸಿಗುವುದು ಎಂದು ತುಳುಕೂಟದ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಅವರು ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ಆಯೋಜಿಸಿದ್ದ ತುಳು ಭಾವಗೀತೆ ಸ್ಪರ್ಧೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾವಗೀತೆಯಲ್ಲಿ ಭಾವನಾತ್ಮಕ ಸಂಬಂಧವಿದೆ. ತಂತಜ್ಞಾನದೊಂದಿಗೆ ನಮ್ಮತನವನ್ನು ಬಿಟ್ಟುಕೊಡಬಾರದು ಎಂದು […]
ಕಾರ್ಕಳ: ಸಾಂಸ್ಕೃತಿಕ ವೈಭವ ಕಾರ್ಯಕ್ರಮ
ಉಡುಪಿ: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ರವಿವಾರ ಕಾರ್ಕಳ ಬೈಲೂರು ಉಮಿಕಲ್ ಬೆಟ್ಟದ ಪರಶುರಾಮ ಥೀಂ ಪಾರ್ಕಿನಲ್ಲಿ ನಡೆಯಿತು. ಯಕ್ಷರಂಗಾಯಣ ಅಧ್ಯಕ್ಷ ಜೀವನ್ ರಾಂ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೈಲೂರು ಗ್ರಾಮ ಪಂಚಾಯತ್ ಅಧ್ಯಕ್ಷ ಜಗದೀಶ್ ಪೂಜಾರಿ, ನೀರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ, ಎರ್ಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಮೀಳಾ ಪೂಜಾರಿ, ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ […]
ಕಾರ್ಕಳ: ನವೆಂಬರ್ 26 ರಂದು ಕೋಟಿ ಚೆನ್ನಯ್ಯ ಥೀಂ ಪಾರ್ಕಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ, ಕೋಟಿ ಚೆನ್ನಯ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ನಡೆಯಲಿರುವ ಮಾಸಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ನವೆಂಬರ್ 26 ರಂದು ಸಂಜೆ 5.30 ಕ್ಕೆ ನಡೆಯಲಿದೆ. ಮೊದಲ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಂದು ಸಂಜೆ 6 ರಿಂದ ರಾತ್ರಿ 9 ರವರೆಗೆ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಳೆಯನ್ನು ಏರ್ಪಡಿಸಲಾಗಿದೆ. ಪ್ರತಿ ತಿಂಗಳು ಥೀಂ ಪಾರ್ಕ್ನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಚಟುವಟಿಕೆಗಳು […]
ನಾಡದೇವಿಯ ಚಿತ್ರ ಅಂತಿಮಗೊಳಿಸಿದ ಸಮಿತಿ: ಸರ್ಕಾರಕ್ಕೆ ಶಿಫಾರಸು ಸಲ್ಲಿಕೆ
ಬೆಂಗಳೂರು: ರಾಜ್ಯ ಸರ್ಕಾರವು ಎಲ್ಲ ಅಧಿಕೃತ ಉದ್ದೇಶಗಳಿಗೆ ಕನ್ನಡ ಮಾತೆ, ಭುವನೇಶ್ವರಿ ದೇವಿಯ ಚಿತ್ರವನ್ನು ಚಿತಪಡಿಸಲು ಸರ್ಕಾರವು ನೇಮಿಸಿದ ಐದು ಸದಸ್ಯರ ಸಮಿತಿಯು ಚಿತ್ರವನ್ನು ಅಂತಿಮಗೊಳಿಸಿದೆ. ನಾಡದೇವಿಯ ನಿರ್ದಿಷ್ಟ ಚಿತ್ರದ ಕೊರತೆಯಿರುವುದನ್ನು ಮನಗಂಡ ಸರ್ಕಾರ ಎಲ್ಲ ಅಧಿಕೃತ ಉದ್ದೇಶಗಳಿಗೆ ಉಪಯೋಗಿಸಲು ಏಕಪ್ರಕಾರದ ಚಿತ್ರವನ್ನು ಆಯ್ಕೆ ಮಾಡಲು ಡಿ.ಮಹೇಂದ್ರ ಅವರ ಅಧ್ಯಕ್ಷತೆಯಲ್ಲಿ ಐವರು ಚಿತ್ರಕಲಾವಿದರ ಸಮಿತಿಯನ್ನು ರಚಿಸಿತ್ತು. ಲಲಿತಾ ಕಲಾ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಡಿ. ಮಹೇಂದ್ರ ಅವರ ಅಧ್ಯಕ್ಷತೆಯ ಈ ಸಮಿತಿಯು ಕರ್ನಾಟಕ ರಾಜ್ಯದ ನಾಡದೇವತೆಯ ಅಧಿಕೃತ […]