ನ. 25 ರಂದು ಅಂಬಲಪಾಡಿ ದೇವಸ್ಥಾನದಲ್ಲಿ ಚಿಗುರು ಸಾಂಸ್ಕೃತಿಕ ಕಾರ್ಯಕ್ರಮ
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಮತ್ತು ತಾಲೂಕು ಘಟಕದ ಸಹಯೋಗದೊಂದಿಗೆ ಚಿಗುರು ಬಾಲ ಪ್ರತಿಭೆಗಳ ಸಾಂಸ್ಕೃತಿಕ ಕಾರ್ಯಕ್ರಮವು ನವೆಂಬರ್ 25 ರಂದು ಮಧ್ಯಾಹ್ನ 2.30 ಕ್ಕೆ ನಗರದ ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ.ಬಿ ವಿಜಯ ಬಲ್ಲಾಳ ಉದ್ಘಾಟಿಸಲಿದ್ದು, ಶಾಸಕ ಕೆ. ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ನಗರಸಭೆ ಅಧ್ಯಕ್ಷೆ […]
ನಾಡದೇವಿಯ ಅಧಿಕೃತ ಚಿತ್ರ ರಚನೆಗೆ ತಜ್ಞರ ಸಮಿತಿ ರಚನೆ: ವಿ. ಸುನಿಲ್ ಕುಮಾರ್
ಬೆಂಗಳೂರು: ರಾಜ್ಯದ ನಾಡದೇವತೆಯ ಚಿತ್ರವನ್ನು ವಿವಿಧ ಚಿತ್ರಪಟಗಳಲ್ಲಿ ವಿವಿಧ ರೀತಿಯಾಗಿ ಚಿತ್ರಿಸಿರಿವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ನಾಡದೇವತೆಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಅವಶ್ಯಕವಾಗಿತ್ತು.ಈ ಹಿನ್ನಲೆಯಲ್ಲಿ ನಾಡದೇವತೆಯ ಪ್ರಮಾಣಿತ ಮತ್ತು ಅಧಿಕೃತ ಚಿತ್ರ ಆಯ್ಕೆ ಮಾಡಿ ಶಿಫಾರಸ್ಸು ಮಾಡಲು ಲಲಿತಕಲಾ ಅಕಾಡೆಮಿ ಅಧ್ಯಕ್ಷ ಡಿ.ಮಹೇಂದ್ರರವರ ನೇತೃತ್ವದಲ್ಲಿ ಐವರು ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿ ಆಯ್ಕೆ ಮಾಡಿ ಶಿಫಾರಸ್ಸು ಮಾಡುವ ಚಿತ್ರವನ್ನು ಅಂತಿಮಗೊಳಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಉಪಯೋಗಿಸಲು ಹಾಗೂ ಶಾಲಾ-ಕಾಲೇಜುಗಳ ಗೋಡೆಯ ಮೇಲೆ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತದೆ […]
ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ
ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು. ಮುನಿಯಾಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ ಆಚಾರ್ಯ ಮಾತನಾಡಿ, ಶಿಕ್ಷಣದಿಂದ ಸಮಾಜದಲ್ಲಿ ಸಮಾನತೆ ಸಾಧ್ಯ. ಅವಕಾಶ ವಂಚಿತ ಸಮುದಾಯಗಳಲ್ಲಿನ ವ್ಯಕ್ತಿಗಳನ್ನು ಮುಖ್ಯಭೂಮಿಕೆಗೆ ಕರೆತರುವಲ್ಲಿ ಶಿಕ್ಷಣದ ಪಾತ್ರ ಮಹತ್ವ. ಶಿಕ್ಷಣದಿಂದ ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಪ್ರತಿಯೊಬ್ಬರಲ್ಲೂ […]
ತೆರೆಮರೆಯ ಅರ್ಹ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ
ಬೆಂಗಳೂರು: ಅರವತ್ತೇಳನೇ ಕನ್ನಡ ರಾಜ್ಯೋತ್ಸವ ನಿಮಿತ್ತವಾಗಿ ರಾಜ್ಯದ ಪ್ರಮುಖ ಸಾಹಿತಿಗಳು, ತೆರೆಮರೆಯ ಸಾಧಕರು, ಕ್ರೀಡಾ ಪಟುಗಳು ಸಮಾಜ ಸೇವಕರು ಸೇರಿದಂತೆ 67 ಜನರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರಕಾರ ಘೋಷಣೆ ಮಾಡಿದೆ. ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ 10 ಸಂಘ-ಸಂಸ್ಥೆಗಳನ್ನೂ ಸರ್ಕಾರ ಗುರುತಿಸಿದ್ದು, ಪದ್ಮ ಪ್ರಶಸ್ತಿ ಮಾದರಿಯಲ್ಲಿ ಈ ವರ್ಷ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಯಲ್ಲೂ ಹೊಸತನವನ್ನು ಮೆರೆದಿದ್ದು, ಸಾಮಾನ್ಯರಾಗಿದ್ದುಕೊಂಡು ಅಸಾಮಾನ್ಯ ಕೆಲಸ ಮಾಡಿದವರು, ಸಮಾಜದ ನಾನಾ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದವರು, […]
ಅಕ್ಟೋಬರ್ 28 ರಂದು ಜಿಲ್ಲೆಯಾದ್ಯಂತ ಏಕಕಾಲದಲ್ಲಿ ಏಕಕಂಠದಲ್ಲಿ ಕೋಟಿ ಕಂಠ ಗಾಯನ
ಉಡುಪಿ: ಈ ಬಾರಿಯ 67 ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ಸಂಭ್ರಮ, ಉತ್ಸಾಹದಿಂದ ಅತ್ಯಂತ ವಿಶಿಷ್ಠವಾಗಿ ಆಚರಿಸಲು ಉದ್ದೇಶಿಸಿದ್ದು, ಒಂದು ಕೋಟಿಗೂ ಹೆಚ್ಚು ಜನರಿಂದ ಏಕ ಕಾಲದಲ್ಲಿ ಏಕ ಕಂಠದಲ್ಲಿ ಆಯ್ದ 6 ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಯಲಿದ್ದು, ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ನಡೆಯುವ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮಲ್ಪೆಯ ಸಮುದ್ರ ಮಧ್ಯದಲ್ಲಿ ಸುಮಾರು 130 ಬೋಟುಗಳಲ್ಲಿ 4000 […]