ದೈವ ನರ್ತಕರಿಗೆ ತಿಂಗಳಿಗೆ ರೂ. 2 ಸಾವಿರ ಮಾಸಶನ: ಸಚಿವ ಸುನಿಲ್ ಕುಮಾರ್ ಘೋಷಣೆ
ಉಡುಪಿ/ಮಂಗಳೂರು: ಕರಾವಳಿ ಭಾಗದಲ್ಲಿ ದೈವ ನರ್ತಕರಿಗೆ ದೀಪಾವಳಿ ಶುಭಸುದ್ದಿ ಬಂದಿದೆ. ದೈವ ನರ್ತಕರಿಗೆ ಮಾಸಾಶನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ […]
ತೆರೆಮರೆಯ ಅರ್ಹ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ: ಸಚಿವ ಸುನಿಲ್ ಕುಮಾರ್
ಉಡುಪಿ: ಈ ಬಾರಿಯ ರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ 9823 ಅರ್ಜಿಗಳು ಬಂದಿವೆ. ಆದರೆ ಈ ಬಾರಿ ತೆರೆಯಮರೆಯಲ್ಲಿನ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಈ ಕುರಿತು ಈಗಾಗಲೇ ಆಯ್ಕೆ ಸಮಿತಿ ರಚನೆಯಾಗಿದ್ದು ಪ್ರಥಮ ಸಭೆ ಕೂಡಾ ಮುಗಿದಿದೆ ಆದಷ್ಟು ಶೀಘ್ರದಲ್ಲಿ ಅರ್ಹ ಸಾಧಕರನ್ನು ಆಯ್ಕೆ ಮಾಡಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು. ಅವರು ಭಾನುವಾರ ಆದಿ ಉಡುಪಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ […]
ಅಲೆವೂರು: ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ
ಅಲೆವೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಗರದ ಅಲೆವೂರು ಪ್ರಗತಿನಗರ ಡಾ. ಶಿವರಾಮ ಕಾರಂತ ಕಲಾಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ತುಳುಕೂಟದ ಜಿಲ್ಲಾ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಅನಾದಿ ಕಾಲದಿಂದ ಕಲೆ, ಸಂಸ್ಕೃತಿ, ಸಂಭ್ರಮವನ್ನು ಬಿಂಬಿಸುವ ಜನಪದ ಕಲೆಗಳು, ಸರ್ವಕಾಲಕ್ಕೂ ಮನರಂಜನೆಯನ್ನು ನೀಡುವುದರ ಜೊತೆಗೆ ನಮ್ಮ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿದೆ. ಇಂದಿನ […]
ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಚಿಗುರು ಹಾಗೂ ಯುವ ಸೌರಭ ಕಾರ್ಯಕ್ರಮಕ್ಕಾಗಿ ಅರ್ಜಿ ಆಹ್ವಾನ
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ 8 ರಿಂದ 14 ವರ್ಷದೊಳಗಿನ ಮಕ್ಕಳ ಪ್ರತಿಭಾ ಪ್ರದರ್ಶನಕ್ಕಾಗಿ ಚಿಗುರು ಕಾರ್ಯಕ್ರಮ ಹಾಗೂ 15 ರಿಂದ 30 ವರ್ಷದೊಳಗಿನ ಯುವ ಕಲಾವಿದರಿಂದ ಯುವ ಸೌರಭ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಲಾವಿದರು ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಜನಪದ ಕಲಾ ಪ್ರಕಾರ, ಸುಗಮ ಸಂಗೀತ, ಸಮೂಹ ನೃತ್ಯ, ನಾಟಕ, ಯಕ್ಷಗಾನ ಹಾಗೂ ಏಕಪಾತ್ರಾಭಿನಯ ಕಲಾಪ್ರಕಾರಗಳಿಗೆ ಜುಲೈ 31 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ […]
ನಾಡಿನ ಕಲಾಪ್ರಕಾರಗಳ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ರಾಜ್ಯಾದ್ಯಂತ ಹಾಗೂ ಹೊರರಾಜ್ಯಗಳಲ್ಲಿ ಕ್ರಿಯಾತ್ಮಕ ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ನಾಡಿನ ಭಾಷಾ ಸಂವರ್ಧನೆ, ಕಲೆ, ಸಾಹಿತ್ಯ ಸಂಗೀತ, ಜಾನಪದ, ನೃತ್ಯ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಸಂಘ-ಸಂಸ್ಥೆಗಳಿಗೆ ಸಹಾಯಧನ ನೀಡಲು ಸೇವಾಸಿಂಧು Sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ www.kannadasiri.karnataka.gov.in ಮೊ.ನಂ: […]