ಬಹರೈನ್ ಕನ್ನಡ ಭವನ ನಿರ್ಮಾಣ ಕಾರ್ಯ‌ ವರ್ಷಾಂತ್ಯದೊಳಗೆ ಪೂರ್ಣ: ಪ್ರದೀಪ್ ಶೆಟ್ಟಿ

ಉಡುಪಿ: ಬಹರೈನ್‌ನಲ್ಲಿ ಸುಮಾರು 12 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಕನ್ನಡ ಭವನ ಈ ವರ್ಷದ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ. ಕರ್ನಾಟಕ ಸರ್ಕಾರದ ಅನುದಾನದಿಂದ ವಿದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ಮೊದಲ ಕನ್ನಡ ಭವನ ಇದಾಗಿದೆ ಎಂದು ಬಹರೈನ್‌ ಕನ್ನಡ ಸಂಘದ ಅಧ್ಯಕ್ಷ ಪ್ರದೀಪ್‌ ಶೆಟ್ಟಿ ಸೋಮವಾರ ಸುದ್ದಿಗೋಷ್ಠಿಯಲ್ಲಿ‌ ತಿಳಿಸಿದರು.ಕಳೆದ ನವೆಂಬರ್‌ ತಿಂಗಳಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು  ಶಿಲಾನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿದ್ದರು. ಸದ್ಯ ಭವನದ ನಿರ್ಮಾಣ ಕಾರ್ಯ ತ್ವರಿತ ಗತಿಯಲ್ಲಿ ಸಾಗುತ್ತಿದೆ. ೨೦೦೮––೦೯ನೇ ಸಾಲಿನಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪನವರು ಬಹರೈನ್‌ಗೆ […]